Categories: CrimeLatestWorld

ಮಗಳ ಮೇಲೆ ಅತ್ಯಾಚಾರವೆಸಗಿದವನನ್ನು ಕೊಂದ ತಾಯಿ: ವಿವಾದಕ್ಕೆ ಕಾರಣವಾಯಿತು ನ್ಯಾಯಾಲಯದ ತೀರ್ಪು

ದೇಶದಲ್ಲಿ ದಿನೇದಿನೇ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು ಸಮಾಜದಲ್ಲಿ ಆತಂಕವನ್ನುಂಟು ಮಾಡುತ್ತಿವೆ. ಮಕ್ಕಳು, ಹದಿಹರೆಯದವರು, ಮಹಿಳೆಯರು ಮಾತ್ರವಲ್ಲದೇ ವೃದ್ಧೆಯರೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಹಲವಾರು ಪ್ರಕರಣಗಳಲ್ಲಿ ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿರುವುದು ಹಾಗೂ ನ್ಯಾಯ ವ್ಯವಸ್ಥೆಯ ನಿಧಾನಗತಿ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

2022ರ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ವರದಿ ಪ್ರಕಾರ, ದೇಶದಲ್ಲಿ ಪ್ರತಿದಿನ ಸರಾಸರಿ 90 ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರವೂ ದಿನಕ್ಕೆ 86ರಿಂದ 89 ಪ್ರಕರಣಗಳು ವರದಿಯಾಗುತ್ತಿದ್ದು, ಅಂದಾಜು ಪ್ರತಿ 17 ನಿಮಿಷಕ್ಕೊಮ್ಮೆ ಒಂದು ದೌರ್ಜನ್ಯ ಸಂಭವಿಸುತ್ತಿದೆ. ಇನ್ನೂ ಅನೇಕ ಪ್ರಕರಣಗಳು ವರದಿಯಾಗದೇ ಉಳಿಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.

ಈ ನಡುವೆ Brazilನಲ್ಲಿ ನಡೆದ ಒಂದು ಪ್ರಕರಣ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. 2025ರ ಮಾರ್ಚ್‌ನಲ್ಲಿ ನಡೆದ ಈ ಘಟನೆದಲ್ಲಿ, ಎರಿಕಾ ಪೆರೇರಾ ಡ ಸಿಲ್ವೇರಾ ವಿಸೆಂಟೆ ಎಂಬ ಮಹಿಳೆ ತನ್ನ 11 ವರ್ಷದ ಮಗಳನ್ನು ರಕ್ಷಿಸಲು ಆಕೆಯ ಮೇಲೆ ದೌರ್ಜನ್ಯ ಎಸಗಲು ಯತ್ನಿಸಿದ್ದ ವ್ಯಕ್ತಿಯನ್ನು ಕೊಂದಿದ್ದಾಳೆ.

ಘಟನೆ ನಡೆದ ವೇಳೆ, Belo Horizonteಯಲ್ಲಿರುವ ತಮ್ಮ ಮನೆಯಲ್ಲಿ ಮಗಳ ಕಿರುಚಾಟ ಕೇಳಿದ ತಾಯಿ ಕೋಣೆಗೆ ಧಾವಿಸಿದಾಗ, ತನ್ನ ಗೆಳೆಯ ಎವರ್ಟನ್ ಅಮರೊ ಡ ಸಿಲ್ವಾ ಮಗಳ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಕಂಡಿದ್ದಾಳೆ. ಇದಕ್ಕೂ ಮುನ್ನ ಆತನಿಂದ ಮಗಳಿಗೆ ಅಸಭ್ಯ ಸಂದೇಶಗಳು ಬಂದಿದ್ದವು ಎಂಬುದೂ ತಿಳಿದುಬಂದಿದೆ.

ಮಗಳ ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಎರಿಕಾ ಆತನಿಗೆ ಅಮಲು ಪದಾರ್ಥ ನೀಡಿ, ಬಳಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಳೆ. ನಂತರ ಘಟನೆ ಬಗ್ಗೆ ಪೊಲೀಸರಿಗೆ ಶರಣಾಗಿದ್ದು, ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ.

ಪ್ರಕರಣದಲ್ಲಿ ಸರ್ಕಾರಿ ವಕೀಲರು ಪೂರ್ವಯೋಜಿತ ಕೊಲೆ ಎಂದು ವಾದಿಸಿದರೆ, ಪ್ರತಿವಾದಿಗಳು ಇದು ಕಾನೂನುಬದ್ಧ ಆತ್ಮರಕ್ಷಣೆ ಎಂದು ವಾದಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು 2026ರ ಮಾರ್ಚ್ 24ರಂದು ಎರಿಕಾಳನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿದೆ.

ಈ ತೀರ್ಪು ಸಮಾಜದಲ್ಲಿ ಮಿಶ್ರ ಪ್ರತಿಕ್ರಿಯೆ ಹುಟ್ಟಿಸಿದ್ದು, ಕೆಲವರು ಆಕೆಯನ್ನು “ಹೀರೋ” ಎಂದು ಕೊಂಡಾಡಿದರೆ, ಇನ್ನೂ ಕೆಲವರು ನ್ಯಾಯ ವ್ಯವಸ್ಥೆಯ ಮಾನದಂಡಗಳ ಬಗ್ಗೆ ಪ್ರಶ್ನೆ ಎಬ್ಬಿಸಿದ್ದಾರೆ. ಪ್ರಾಸಿಕ್ಯೂಷನ್ ಈ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

11 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

15 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago