Categories: CrimeLatest

ಹಣದಾಸೆಗೆ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಿದ ತಾಯಿ; ಗಿರಾಕಿಗಳ ಬಳಿ ಬಿಟ್ಟು ಬರುತ್ತಿದ್ದ ಮಲತಂದೆ:- ಮೂವರ ಬಂಧನ

ಬೆಂಗಳೂರು: ಹಣದಾಸೆಗೆ ಒಳಗಾಗಿ ತನ್ನದೇ 15 ವರ್ಷದ ಮಗಳನ್ನು ಮಾಂಸದಂಧೆಗೆ ತಳ್ಳಿದ ತಾಯಿಯ ಅಮಾನವೀಯ ಕೃತ್ಯವನ್ನು ಚಂದ್ರಾಲೇಔಟ್ ಪೊಲೀಸ್ ಠಾಣೆ ಅಧಿಕಾರಿಗಳು ಭೇದಿಸಿದ್ದಾರೆ. ಈ ಸಂಬಂಧ ಬಾಲಕಿಯ ತಾಯಿ, ಮಲತಂದೆ ಹಾಗೂ ಮಧ್ಯವರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ತನಿಖೆ ವೇಳೆ ಹೊರಬಂದ ಮಾಹಿತಿಯ ಪ್ರಕಾರ, ಬಾಲಕಿಯ ತಾಯಿ ಮತ್ತು ಮಲತಂದೆ ಪ್ರತಿದಿನ ಕಾರಿನಲ್ಲಿ ಆಕೆಯನ್ನು ಮಧ್ಯವರ್ತಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದರು. ಅಲ್ಲಿ ಬಾಲಕಿ ದಿನಪೂರ್ತಿ ಅನ್ಯ ವ್ಯಕ್ತಿಗಳ ಕಿರುಕುಳಕ್ಕೆ ಒಳಗಾಗುತ್ತಿದ್ದಳು ಎಂದು ತಿಳಿದುಬಂದಿದೆ.
ಮಧ್ಯವರ್ತಿಯು ಬಾಲಕಿಯೊಂದಿಗೆ ಸಮಯ ಕಳೆಯಲು ಗಿರಾಕಿಗಳಿಂದ ₹6 ಸಾವಿರದಿಂದ ₹10 ಸಾವಿರವರೆಗೆ ಹಣ ವಸೂಲು ಮಾಡುತ್ತಿದ್ದಳು. ಆ ಹಣದಲ್ಲಿ ಅರ್ಧದಷ್ಟು ಮೊತ್ತವನ್ನು ಬಾಲಕಿಯ ತಾಯಿಗೆ ನೀಡಲಾಗುತ್ತಿತ್ತು ಎಂಬ ಆಘಾತಕಾರಿ ಸಂಗತಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ಪ್ರಕರಣ ಬೆಳಕಿಗೆ ಬಂದ ನಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಬಾಲಕಿಯ ತಾಯಿ, ಮಲತಂದೆ ಮತ್ತು ಮಧ್ಯವರ್ತಿಯನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಈ ಕೃತ್ಯದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಸಾಧ್ಯತೆ ಇರುವುದಾಗಿ ಶಂಕಿಸಲಾಗಿದ್ದು, ಸಂಬಂಧಪಟ್ಟವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಬಕಾರಿ ಅಧಿಕಾರಿಗೆ ಲೋಕಾಯುಕ್ತ ಬಲೆ: ಕೋಟ್ಯಂತರ ಅಕ್ರಮ ಆಸ್ತಿ ಪತ್ತೆ

ಉಡುಪಿ: ಅಬಕಾರಿ ಇಲಾಖೆಯ ಉಡುಪಿ ಜಿಲ್ಲಾ ಅಧೀಕ್ಷಕ ಶ್ರೀನಿವಾಸ್ ಟಿ.ಎಂ. ವಿರುದ್ಧ ಅಪಾರ ಪ್ರಮಾಣದ ಅಕ್ರಮ ಆಸ್ತಿ ಸಂಗ್ರಹಿಸಿರುವ ಆರೋಪದ…

4 hours ago

ಜೋಯಿಡಾದಲ್ಲಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದಲ್ಲಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ. ಸರ್ಕಾರಿ…

19 hours ago

ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳ್ಳತನ

ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ…

3 days ago

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

1 week ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

3 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

3 weeks ago