Categories: CrimeLatest

ಮೊಹರಂ ಮೆರವಣಿಗೆ ಟಾರ್ಗೆಟ್?: 14,900 ವಿಷಪೂರಿತ ಕ್ಯಾಪ್ಸೂಲ್‌ಗಳೊಂದಿಗೆ ಪುಣೆ ಉದ್ಯಮಿ ಬಂಧನ

ಮುಂಬೈ: ಮುಹರಂ ಮೆರವಣಿಗೆಯ ವೇಳೆ ಸಾರ್ವಜನಿಕರಿಗೆ ವಿಷಪ್ರಾಶನ ಮಾಡಿಸಲು ಸಂಚು ರೂಪಿಸಲಾಗಿದೆ ಎಂಬ ಶಂಕೆಯ ಮೇರೆಗೆ ಮುಂಬೈ ಪೊಲೀಸರು ಭಾರೀ ಕಾರ್ಯಾಚರಣೆ ನಡೆಸಿ, 14,900 ವಿಷಪೂರಿತ ಕ್ಯಾಪ್ಸೂಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಪುಣೆ ಮೂಲದ ಉದ್ಯಮಿಯೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಮೆರವಣಿಗೆಯನ್ನು ಗುರಿಯಾಗಿಸಿಕೊಂಡು ಸಾಗಿಸಲಾಗುತ್ತಿದ್ದ ಕ್ಯಾಪ್ಸೂಲ್‌ಗಳನ್ನು ಜಪ್ತಿ ಮಾಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಅವುಗಳಲ್ಲಿ ‘ಜಿಂಕ್ ಫಾಸ್ಫೈಡ್’ ಎಂಬ ತೀವ್ರ ವಿಷಕಾರಿ ರಾಸಾಯನಿಕವನ್ನು ತುಂಬಲಾಗಿತ್ತು ಎಂಬುದು ಬೆಳಕಿಗೆ ಬಂದಿದೆ. ಈ ರಾಸಾಯನಿಕವನ್ನು ಸಾಮಾನ್ಯವಾಗಿ ಇಲಿ ವಿಷವಾಗಿ ಬಳಸಲಾಗುತ್ತದೆ.

ಮೆರವಣಿಗೆಯಲ್ಲಿ ಭಾಗವಹಿಸುವ ಜನರಿಗೆ ಈ ಕ್ಯಾಪ್ಸೂಲ್‌ಗಳನ್ನು ತಲುಪಿಸಿ ಅನಾಹುತ ಸೃಷ್ಟಿಸುವ ಉದ್ದೇಶ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣದ ತನಿಖೆಯನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು, ಬಂಧಿತನ ಸಂಪರ್ಕಗಳು, ಆರ್ಥಿಕ ವ್ಯವಹಾರಗಳು ಹಾಗೂ ಇತ್ತೀಚಿನ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಈ ಪ್ರಕರಣದ ಹಿಂದೆ ಯಾವುದೇ ಸಂಘಟನೆ ಅಥವಾ ವಿದ್ವಂಸಕ ಶಕ್ತಿಗಳ ಕೈವಾಡವಿದೆಯೇ ಎಂಬ ಕೋನದಲ್ಲೂ ತನಿಖೆ ಮುಂದುವರಿದಿದೆ. ಭದ್ರತಾ ದೃಷ್ಟಿಯಿಂದ ಮುಹರಂ ಮೆರವಣಿಗೆಗಳ ಸುತ್ತ ಪೊಲೀಸ್ ಬಂದೋಬಸ್ತ್ ಮತ್ತಷ್ಟು ಕಟ್ಟು ನಿಟ್ಟಾಗಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

2 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago