Crime

ಮನೆಗಳ್ಳರನ್ನು ಹೆಡೆಮುರಿ ಕಟ್ಟಿದ ಮುಂಡಗೋಡ ಪೋಲಿಸರು..!

ಮುಂಡಗೋಡ ತಾಲೂಕಿನ ಪಟ್ಟಣದಲ್ಲಿ ಕಳೆದ ತಿಂಗಳು ನಡೆದ ಮನೆ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಮುಂಡಗೋಡ ಪೋಲಿಸರು ಯಶಸ್ವಿಯಾಗಿದ್ದಾರೆ.
ದಿನಾಂಕ 28-10-2024ರಂದು ಪಟ್ಟಣದ ಭರತನಗರದಲ್ಲಿ ಇರುವ ಅರ್ಜುನ್ ಸಿಂಗ್ ಠಾಕೂರ್ ಅವರ ಮನೆಯಲ್ಲಿ ಕಿಟಕಿಗೆ ಹಾಕಿದ್ದ ಜಾಲರಿಯನ್ನು ಮುರಿದು ಮನೆಯೊಳಗೆ ನುಗ್ಗಿ ಮನೆಯಲ್ಲಿ ಇದ್ದ ಚಿನ್ನಾಭರಣ ಹಾಗೂ ಹಣವನ್ನು ಕಳ್ಳತನ ಮಾಡಿದ್ದ ಬಗ್ಗೆ ಪ್ರಕರಣ ದಾಖಲಾಗಿದ್ದು ಪ್ರಕರಣವನ್ನು ಕೈಗೆತ್ತಿಕೊಂಡ ಪೋಲಿಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಚೇತನ್ ತಂದೆ ನರೇಶ ಪಾರ್ಗೆ, ವಿನಾಯಕ್ ಕರಿಯಪ್ಪ ಬೋವಿವಡ್ಡರ್ ಸಾ : ಇಬ್ಬರೂ ಶುಭಾಶ ನಗರ, ಮುಂಡಗೋಡರವರು ಬಂಧಿತ ಆರೋಪಿಗಳಾಗಿದ್ದಾರೆ ಬಂಧಿತರಿಂದ 10 ಗ್ರಾಂ ಬಂಗಾರದ ಚೈನ್ (52,000 ರೂ), 2.5 ಗ್ರಾಂ ತೂಕದ ಬಂಗಾರದ ಉಂಗುರ (20,500 ರೂ) , ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣವನ್ನು ಭೇದಿಸಲು ಶ್ರೀ ನಾರಾಯಣ ಎಮ್ ಪೋಲಿಸ್ ಅಧಿಕ್ಷಕರು ಉತ್ತರ ಕನ್ನಡ, ಶ್ರೀ ಸಿ ಟಿ ಜಯಕುಮಾರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ, ಶ್ರೀ ಜಗದೀಶ್ ಎಂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ, ಶ್ರೀ ಗಣೇಶ್ ಕೆ ಎಲ್ ಡಿಎಸ್ಪಿ ಶಿರಸಿರವರ ಮಾರ್ಗದರ್ಶನದಲ್ಲಿ ಮುಂಡಗೋಡದ ಪೋಲಿಸ್ ನಿರೀಕ್ಷಕರಾದ ಶ್ರೀ ರಂಗನಾಥ ನೀಲಮ್ಮನವರ್, ಪಿಎಸ್ಐ ಹನುಮಂತ ಕಡಗುಂಟಿ ಸಿಬ್ಬಂದಿಗಳಾದ ಕೋಟೇಶ್ ನಾಗರವಳ್ಳಿ, ಅಣ್ಣಪ್ಪ ಬುಡಗೇರ, ಮಹಾಂತೇಶ ಮುಧೋಳ, ತಿರುಪತಿ ಚೌಡಣ್ಣನವರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಕಾರ್ಯಚರಣೆಯಲ್ಲಿ ಭಾಗವಹಿಸಿದ ಠಾಣೆಯ ಅಧಿಕಾರಿ/ಸಿಬ್ಬಂದಿಗಳನ್ನು ಪೋಲಿಸ್ ಅಧಿಕ್ಷಕರು ಪ್ರಶಂಸಿಸಿ, ಶ್ಲಾಘಿಸಲಾಗಿದೆ.

ವರದಿ: ಮಂಜುನಾಥ್ ಎಫ್ ಎಚ್

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago