Latest

ಪತ್ನಿಯಿಂದ ಹತ್ಯೆ: ಪತಿಯ ಕೊಲೆಗಾಗಿ ಶಾಲಾ ಮಕ್ಕಳ ಬಳಕೆ!”

ಮುಂಬೈ: ಪತಿಯ ಹತ್ಯೆಗೆ ತಾನೇ ಶಡ್ಯಂತ್ರ ರೂಪಿಸಿ, ಶಾಲೆಯ ಅಪ್ರಾಪ್ತ ವಿದ್ಯಾರ್ಥಿಗಳ ಸಹಾಯದಿಂದ ಶವವನ್ನು ನಾಶಪಡಿಸಿದ ಭೀಕರ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿದು ಬೆಳಕಿಗೆ ಬಂದಿದೆ. ಪ್ರಾಂಶುಪಾಲೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ, ವೈಯಕ್ತಿಕ ವೈಷಮ್ಯದಿಂದ ಪತಿಯನ್ನು ನಷ್ಠಕಾರಿ ಮಾರ್ಗದಲ್ಲಿ ಕೊಂದಿದ್ದು, ಇದೀಗ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

ಮೃತ ವ್ಯಕ್ತಿಯನ್ನು ನಾಗ್ಪುರ ಮೂಲದ ಶಾಂತನು ದೇಶಮುಖ್ (32) ಎಂದು ಗುರುತಿಸಲಾಗಿದೆ. ಈತನ ಪತ್ನಿ ನಿಧಿ ದೇಶಮುಖ್ (24) ಮುಂಬೈನ ಸನ್‌ರೈಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಂಶುಪಾಲೆಯಾಗಿ ಸೇವೆ ಸಲ್ಲಿಸುತ್ತಿದ್ದಳು. ಮೇ 15 ರಂದು ಚೌಸಲಾ ಅರಣ್ಯ ಪ್ರದೇಶದಲ್ಲಿ ಸುಟ್ಟ ಸ್ಥಿತಿಯ ಶವವೊಂದು ಪತ್ತೆಯಾಗಿದ್ದು, ಕೊನೆಯದಾಗಿ DNA ಪರೀಕ್ಷೆಯಿಂದ ಶಾಂತನು ಎಂಬುದು ದೃಢಪಟ್ಟಿತು.

ಆರೋಪ ಪ್ರಕಾರ, ಪತಿಗೆ ಊಟದಲ್ಲಿ ವಿಷ ನೀಡಿದ ನಿಧಿ, ಬಳಿಕ ಪತಿ ಮೃತಪಟ್ಟ ಬಳಿಕ ಶವವನ್ನು ಬೆಂಕಿ ಹಚ್ಚಿದಳು. ಈ ಭೀಕರ ಕಾರ್ಯದಲ್ಲಿ ಶಾಲೆಯ ಕೆಲ ಅಪ್ರಾಪ್ತ ವಿದ್ಯಾರ್ಥಿಗಳ ಸಹಕಾರ ಪಡೆದಿದ್ದಾಳೆ ಎನ್ನಲಾಗಿದೆ. ಶಿಕ್ಷಕರಂಥವರಿಂದ ಇದೇನೂ ನಿರೀಕ್ಷಿಸದ ಮಕ್ಕಳು ಈ ಕ್ರೂರ ಕೃತ್ಯದ ಭಾಗಿಯಾಗಿದ್ದ ವಿಷಯ ಸ್ಥಳೀಯರಲ್ಲಿ ತೀವ್ರ ಆಘಾತ ಉಂಟುಮಾಡಿದೆ.

ಪೊಲೀಸರು ಸ್ಥಳೀಯರ ಸಹಾಯದಿಂದ ಗಂಭೀರ ತನಿಖೆ ನಡೆಸಿದ್ದು, ಶಂಕೆಯುತವಾಗಿ ಕಂಡುಬಂದ ಪತ್ನಿಯ ವಿರುದ್ಧ ಸಾಕ್ಷ್ಯಗಳನ್ನು ಕಲೆಹಾಕಿದರು. ವಿಚಾರಣೆ ವೇಳೆ ನಿಧಿ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ. ಪ್ರಕರಣದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಭೀಕರ ಘಟನೆಯು ಶಿಕ್ಷಣ ಕ್ಷೇತ್ರದ ನೈತಿಕತೆಗೆ ಗಬ್ಬೆ ತರುತ್ತಿರುವುದರೊಂದಿಗೆ, ಬಾಲಮನಸ್ಸಿನಲ್ಲಿ ನಾಪತ್ತೆಯಾದ ಮಾನವೀಯತೆ ಕುರಿತು ಚಿಂತೆ ಉಂಟುಮಾಡಿದೆ.

ಪೊಲೀಸರು ಹೆಚ್ಚಿನ ಮಾಹಿತಿ ಹಾಗೂ ಹಿನ್ನೆಲೆ ಮಾಹಿತಿ ಸಂಗ್ರಹಿಸುವ ಕಾರ್ಯ ಮುಂದುವರೆಸಿದ್ದಾರೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

14 minutes ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

16 minutes ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

18 minutes ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

48 minutes ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

1 hour ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

2 hours ago