ಗುರುವಾರ ದೆಹಲಿಯ ಮಾಡೆಲ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ರಾಹುಲ್ ಹಾಗೂ ಆತನ ಸಹೋದರ ಹರೀಶ್, ಸೋನುವಿನ ಹೊಟ್ಟೆಗೆ ಹಲವು ಬಾರಿ ಚಾಕುವಿನಿಂದ ಇರಿಯುವ ಮೂಲಕ ಹತ್ಯೆಗೈದಿದ್ದಾರೆ. ಸೋನು ಹಾಗೂ ರಾಹುಲ್ ಒಟ್ಟಿಗೆ ಅಡುಗೆ ಕೆಲಸ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಸೋನು ಮೂವತ್ತು ರೂಪಾಯಿ ಪಡೆದುಕೊಂಡಿದ್ದಾನೆ. ಆದರೆ ಎಷ್ಟು ದಿನಗಳಾದರೂ ಸಾಲ ಹಿಂದಿರುಗಿಸದ ಕಾರಣ ಇವರಿಬ್ಬರ ನಡುವೆ ಪದೇ ಪದೇ ಜಗಳವಾಗುತ್ತಿತ್ತು ಎನ್ನಲಾಗಿದೆ.
ಗುರುವಾರದಂದು ತನ್ನ ಸಹೋದರ ಹರೀಶ್ ನನ್ನ ಕರೆದುಕೊಂಡು ರಾಹುಲ್, ಸೋನು ಬಳಿಗೆ ಬಂದಿದ್ದು, ಮೂವರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಇದು ವಿಕೋಪಕ್ಕೆ ತೆರಳಿದ ಬಳಿಕ ಸಹೋದರರು ಸೋನುವಿಗೆ ಚಾಕುವಿನಿಂದ ಇರಿದಿದ್ದಾರೆ. ಗಲಾಟೆ ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದ ಸೋನುನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದಾನೆ. ಇದೀಗ ಸಹೋದರರನ್ನು ಬಂಧಿಸಿರುವ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…