Categories: CrimeLatest

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ

ಖಾಲಿ ಸೈಟ್‌ಗಳಲ್ಲಿ ಕಸ ಎಸೆಯುವುದನ್ನು ತಡೆಗಟ್ಟಲು ಹಾಗೂ ಸೈಟ್‌ಗಳನ್ನು ಸ್ವಚ್ಛವಾಗಿಡುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನೀಡಿದ್ದ ನೋಟಿಸ್‌ ಇದೀಗ ಮುಚ್ಚಿಹೋಗಿದ್ದ ಕೊಲೆ ಪ್ರಕರಣವೊಂದನ್ನು ಬಯಲಿಗೆ ತಂದಿದೆ.

ಖಾಲಿ ಸೈಟ್‌ ಸ್ವಚ್ಛಗೊಳಿಸುವ ವೇಳೆ ಹಾಸಿಗೆಯಲ್ಲಿ ಸುತ್ತಿ ಎಸೆಯಲಾಗಿದ್ದ ಮಹಿಳೆಯ ಕೊಳೆತ ಶವ ಪತ್ತೆಯಾಗಿದ್ದು, ಪ್ರಕರಣದ ತನಿಖೆ ನಡೆಸಿದ ಸಂಪಿಗೆಹಳ್ಳಿ ಪೊಲೀಸರು ಪತ್ನಿಯನ್ನೇ ಕೊಲೆ ಮಾಡಿದ್ದ ಆರೋಪದ ಮೇಲೆ ಪತಿಯನ್ನು ಬಂಧಿಸಿದ್ದಾರೆ.

ಒಡಿಶಾ ಮೂಲದ ಸಾಗರ್ ಚಂದ್ರ ರಾವತ್ (32) ಬಂಧಿತ ಆರೋಪಿ. ಈತ ತನ್ನ ಪತ್ನಿ ಅನುಸೂಯ (28) ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಗರ್ ಮತ್ತು ಅನುಸೂಯ ಪ್ರೀತಿಸಿ ವಿವಾಹವಾಗಿದ್ದರು. ಬೆಂಗಳೂರಿನ ಪ್ರತ್ಯೇಕ ಹೋಟೆಲ್‌ಗಳಲ್ಲಿ ಇಬ್ಬರೂ ಕೆಲಸ ಮಾಡುತ್ತಿದ್ದರು. ಹಣಕಾಸಿನ ವಿಚಾರ ಹಾಗೂ ಪತಿಯ ಸಂಬಳದ ವಿಷಯವಾಗಿ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ಆಗಸ್ಟ್ 11ರಂದು ಜಗಳ ವಿಕೋಪಕ್ಕೆ ತಿರುಗಿ ಕೊಲೆ

ಆಗಸ್ಟ್ 11ರಂದು ಸಾಗರ್ ಮನೆಗೆ ಬಂದಾಗ ಪತ್ನಿಯೊಂದಿಗೆ ಮತ್ತೆ ಜಗಳ ನಡೆದಿದೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿದ್ದು, ಆರೋಪಿ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಕೊಲೆ ಮಾಡಿದ ಬಳಿಕವೂ ಸುಮಾರು ಮೂರು ದಿನಗಳ ಕಾಲ ಆರೋಪಿ ಮನೆಯಲ್ಲೇ ಶವದೊಂದಿಗೆ ಇದ್ದ ಎನ್ನಲಾಗಿದೆ. ನಂತರ ಮೃತದೇಹವನ್ನು ಹಾಸಿಗೆಯಲ್ಲಿ ಸುತ್ತಿ, ಸಂಪಿಗೆಹಳ್ಳಿ ಸಮೀಪದ ಎಂ.ಎಸ್. ನಗರ ಅಗ್ರಹಾರ ಲೇಔಟ್‌ನ ಖಾಲಿ ಸೈಟ್‌ನಲ್ಲಿ ಎಸೆದು ಪರಾರಿಯಾಗಿದ್ದಾನೆ.

ಯಾರಿಗೂ ಅನುಮಾನ ಬಾರದಂತೆ ಆರೋಪಿ ಪ್ರತಿದಿನವೂ ಆ ಸೈಟ್‌ನ ಬಳಿ ತೆರಳಿ ಶವ ಪತ್ತೆಯಾಗಿದೆಯೇ ಎಂಬುದನ್ನು ಗಮನಿಸುತ್ತಿದ್ದ ಎನ್ನಲಾಗಿದೆ.

ಜಿಬಿಎ ನೋಟಿಸ್‌ನಿಂದ ಬಯಲಾಯ್ತು ಪ್ರಕರಣ

ಖಾಲಿ ಸೈಟ್‌ಗಳನ್ನು ಸ್ವಚ್ಛವಾಗಿಡುವಂತೆ ಜಿಬಿಎ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸೈಟ್ ಮಾಲೀಕರು ಸ್ವಚ್ಛತಾ ಕಾರ್ಮಿಕರನ್ನು ಕಳುಹಿಸಿದ್ದರು. ಸೈಟ್‌ ಸ್ವಚ್ಛಗೊಳಿಸುವ ವೇಳೆ ಹಾಸಿಗೆಯಲ್ಲಿ ಸುತ್ತಿಟ್ಟಿದ್ದ ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆಯ ಶವ ಪತ್ತೆಯಾಗಿದೆ. ಶವವನ್ನು ನಾಯಿಗಳು ಎಳೆದಾಡಿದ್ದ ಸ್ಥಿತಿಯಲ್ಲಿತ್ತು ಎನ್ನಲಾಗಿದೆ.

ಸೈಟ್ ಮಾಲೀಕರು ನೀಡಿದ ದೂರಿನ ಮೇರೆಗೆ ಸಂಪಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಶವದ ಮೇಲಿದ್ದ ‘ವಿಶಾಲ್ ಮಾರ್ಟ್’ ಬಟ್ಟೆಯ ಟ್ಯಾಗ್ ಪೊಲೀಸರಿಗೆ ಮಹತ್ವದ ಸುಳಿವು ನೀಡಿತು.

ಬಟ್ಟೆಯ ಬಿಲ್‌ ಆಧರಿಸಿ ತನಿಖೆ ನಡೆಸಿದ ಪೊಲೀಸರು ಮೃತ ಮಹಿಳೆಯ ಸಂಪರ್ಕ ಸಂಖ್ಯೆಯನ್ನು ಪತ್ತೆಹಚ್ಚಿ, ಆಕೆ ಅನುಸೂಯ ಎಂಬುದನ್ನು ಗುರುತಿಸಿದರು. ಬಳಿಕ ಆಕೆ ಕೆಲಸ ಮಾಡುತ್ತಿದ್ದ ಹೋಟೆಲ್‌ನಲ್ಲಿ ವಿಚಾರಣೆ ನಡೆಸಿದಾಗ ದಂಪತಿ ನಡುವೆ ನಡೆಯುತ್ತಿದ್ದ ಜಗಳದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತು.

ಇದಾದ ಬಳಿಕ ಸಾಗರ್ ಚಂದ್ರ ರಾವತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣದ ರಹಸ್ಯ ಬಯಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಸಂಪಿಗೆಹಳ್ಳಿ ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

20 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago