ಹಣಕಾಸಿನ ವಿಚಾರಕ್ಕೆ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಪಿಎಂಸಿ ಯಾರ್ಡ್ನಲ್ಲಿ ನಡೆದಿದೆ. ಮೃತನನ್ನು 30 ವರ್ಷದ ಓಂಕಾರ ಎಂದು ಗುರುತಿಸಲಾಗಿದೆ. ಕೊಲೆಗೆ ಸಂಬಂಧಿಸಿದಂತೆ ಧನರಾಜ್, ವಿಜಯ್ ಹಾಗೂ ಸುನಿಲ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇನ್ನು ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಆರೋಪಿಗಳು ಹಾಗೂ ಕೊಲೆಯಾದ ಓಂಕಾರ ಎಲ್ಲರೂ ಸ್ನೇಹಿತರಾಗಿದ್ದು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದರು. 20/11/2022ರ ರಾತ್ರಿ 10.30ರ ಸುಮಾರಿಗೆ ಮನೆಯಲ್ಲಿದ್ದ ಓಂಕಾರನನ್ನು ಸ್ನೇಹಿತರೇ ಎಪಿಎಂಸಿ ಯಾರ್ಡ್ಗೆ ಕರೆದುಕೊಂಡು ಬಂದಿದ್ದು, ಎಲ್ಲರೂ ಯಾರ್ಡ್ನಲ್ಲಿ ಮಾತು ಕತೆ ನಡೆಸಿದ್ದಾರೆ. ಈ ವೇಳೆ ಹಣದ ವಿಚಾರಕ್ಕೆ ಸಂಬಧಿಸಿ ಗೆಳೆಯ ಓಂಕಾರನನ್ನೇ ಉಳಿದ ಸ್ನೇಹಿತರು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಕರಣ ತರೀಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…