Categories: CrimeLatest

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿಯ ಹತ್ಯೆ: ಲಿವ್-ಇನ್ ಸಂಗಾತಿ ಬಂಧನ, ಕುಟುಂಬದಲ್ಲಿ ಆಕ್ರಂದನ

ಉಜ್ವಲ ಭವಿಷ್ಯದ ಕನಸಿನೊಂದಿಗೆ ಉನ್ನತ ಶಿಕ್ಷಣಕ್ಕಾಗಿ ಕೆನಡಾಕ್ಕೆ ತೆರಳಿದ್ದ ಭಾರತೀಯ ವಿದ್ಯಾರ್ಥಿನಿಯೊಬ್ಬಳು ಹತ್ಯೆಯಾಗಿರುವ ಘಟನೆ ಆಘಾತ ಮೂಡಿಸಿದೆ. ಪಂಜಾಬ್‌ನ ಲುಧಿಯಾನ ಮೂಲದ 23 ವರ್ಷದ ದಮನ್‌ಪ್ರೀತ್ ಕೌರ್ ಅವರನ್ನು ಎಡ್ಮಂಟನ್‌ನಲ್ಲಿ ಅವರ ಲಿವ್-ಇನ್ ಸಂಗಾತಿ ಕೊಲೆ ಮಾಡಿರುವ ಆರೋಪದಡಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಮಾಹಿತಿಯ ಪ್ರಕಾರ, ದಮನ್‌ಪ್ರೀತ್ ಕೌರ್ ಸುಮಾರು ಐದು ವರ್ಷಗಳ ಹಿಂದೆ ಸ್ಟೂಡೆಂಟ್ ವೀಸಾದ ಮೇಲೆ ಕೆನಡಾಕ್ಕೆ ತೆರಳಿದ್ದರು. ಜುಲೈ 9ರಂದು ಎಡ್ಮಂಟನ್‌ನ ಸಿಲ್ವರ್‌ಬೆರಿ ಪ್ರದೇಶದ ನಿವಾಸದಲ್ಲಿ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜುಲೈ 12ರಂದು ಅವರು ಮೃತಪಟ್ಟಿದ್ದಾರೆ.

ಜುಲೈ 14ರಂದು ನಡೆದ ಮರಣೋತ್ತರ ಪರೀಕ್ಷೆಯಲ್ಲಿ ದಮನ್‌ಪ್ರೀತ್ ಅವರ ಸಾವಿಗೆ ಕತ್ತು ಹಿಸುಕಿರುವುದೇ ಕಾರಣ ಎಂಬುದು ದೃಢಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರೊಂದಿಗೆ ವಾಸವಿದ್ದ 22 ವರ್ಷದ ರಿತೇಶ್ ಕುಮಾರ್ ಎಂಬಾತನನ್ನು ಕೆನಡಾ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಎರಡನೇ ಹಂತದ ಕೊಲೆ (Second-degree Murder) ಆರೋಪ ದಾಖಲಿಸಲಾಗಿದೆ. ಇದನ್ನು ‘ಇಂಟಿಮೇಟ್ ಪಾರ್ಟ್ನರ್ ಹೋಮಿಸೈಡ್’ ಪ್ರಕರಣ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ದಮನ್‌ಪ್ರೀತ್ ಅವರ ಶಿಕ್ಷಣ ಹಾಗೂ ವಿದೇಶಿ ಕನಸಿಗಾಗಿ ಪೋಷಕರು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಕುಟುಂಬಕ್ಕೆ ಆಸರೆಯಾಗಬೇಕಿದ್ದ ಮಗಳ ಅಕಾಲಿಕ ಮರಣದಿಂದ ಕುಟುಂಬ ತೀವ್ರ ದುಃಖಕ್ಕೆ ಒಳಗಾಗಿದೆ. ಮೃತದೇಹವನ್ನು ಭಾರತಕ್ಕೆ ತರಲು ‘ಗೋ ಫಂಡ್ ಮೀ’ (GoFundMe) ಮೂಲಕ ಆರ್ಥಿಕ ನೆರವು ಸಂಗ್ರಹಿಸಲಾಗುತ್ತಿದ್ದು, 20,000 ಕೆನಡಿಯನ್ ಡಾಲರ್ ಗುರಿಯಲ್ಲಿ ಈಗಾಗಲೇ 18,000 ಡಾಲರ್‌ಗಿಂತ ಹೆಚ್ಚು ಹಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ದಿನಗಳಲ್ಲಿ ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಹಲವು ಅಹಿತಕರ ಘಟನೆಗಳು ವರದಿಯಾಗುತ್ತಿರುವ ಹಿನ್ನೆಲೆ, ಅಲ್ಲಿರುವ ಭಾರತೀಯ ಸಮುದಾಯ ಹಾಗೂ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಮತ್ತೆ ಆತಂಕ ವ್ಯಕ್ತವಾಗಿದೆ.

ಭ್ರಷ್ಟರ ಬೇಟೆ

Recent Posts

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

3 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

3 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

3 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago

ವಡ್ಡಗೆರೆ ವೀರನಾಗಮ್ಮ ದೇವಸ್ಥಾನ ಸೇರಿದಂತೆ 9 ದೇವಸ್ಥಾನಗಳಲ್ಲಿ ಕಳ್ಳತನ: ಅಂತಾರಾಜ್ಯ ಕಳ್ಳರ ಬಂಧನ, 21 ಕೆಜಿ ಬೆಳ್ಳಿ ಆಭರಣ ವಶ

ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಿದ ಶೂ–ಸ್ಯಾಂಡಲ್ ಕಳಪೆ? ಸೆ.18ರೊಳಗೆ ಲೋಕಾಯುಕ್ತರಿಗೆ ದೂರು ಸಲ್ಲಿಸಲು ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್‌ಗಳ…

4 days ago