ದೊಡ್ಡಬಳ್ಳಾಪುರ, ಜುಲೈ 2: ನಗರ ಹೊರವಲಯದ ಬಾಶೆಟ್ಟಿಹಳ್ಳಿ ಬಳಿ ಭಯಾನಕ ಘಟನೆ ನಡೆದಿದೆ. ಇಲ್ಲಿನ ಪೆಟ್ರೋಲ್ ಬಂಕ್ ಹಿಂಭಾಗದ ಪೊದೆಯಲ್ಲಿ ಗೋಣಿ ಚೀಲದಲ್ಲಿ ಮೊಟಕುಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಈ ಬೆಳವಣಿಗೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಸ್ಥಳೀಯ ವ್ಯಕ್ತಿಯೊಬ್ಬರು ಶಂಕಿತ ಚೀಲವೊಂದನ್ನು ಕಾಣಿಸಿಕೊಂಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಶವವನ್ನು ವಶಕ್ಕೆ ಪಡೆದಿದ್ದಾರೆ. ಶವದ ಸ್ಥಿತಿಯಿಂದ ನೋಡಿದರೆ, ಘಟನೆ ಸುಮಾರು ಹತ್ತು ದಿನಗಳ ಹಿಂದೆ ನಡೆದಿರುವ ಸಾಧ್ಯತೆ ವ್ಯಕ್ತವಾಗಿದೆ. ಶವ ಗುರುತಿಸಲು ಸಾಧ್ಯವಾಗದಷ್ಟು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಶ್ವಾನದಳ ಹಾಗೂ ವಿಧಿವಿಜ್ಞಾನ ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಶವ ಪತ್ತೆಯಾಗಿರುವ ಪ್ರದೇಶ ಜನವಸತಿ ಹೊಂದಿರುವುದರಿಂದ ಸಾರ್ವಜನಿಕರಲ್ಲಿ ಭಯ ಮತ್ತು ಗೊಂದಲ ಉಂಟಾಗಿದೆ.
ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗಾಧಿಕಾರಿ ರವಿ.ಪಿ, ಎಸ್‌ಪಿ ಸಿ.ಕೆ.ಬಾಬಾ, ಇನ್‌ಸ್ಪೆಕ್ಟರ್ ಸಾಧಿಕ್ ಪಾಷಾ ಸೇರಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಅಸ್ಪಷ್ಟ ಅಂಶಗಳನ್ನು ಬಯಲಿಗೆಳೆಯಲು ತನಿಖೆ ಆರಂಭಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…