Latest

ಮೈಸೂರು ನಗರ ಪೊಲೀಸರಿಂದ ಅಂತರರಾಜ್ಯ ಸರಗಳ್ಳರ ಬಂಧನ.

ಮೈಸೂರು ನಗರ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಾಂಕ: 17/05/2025 ರಂದು ಲಷ್ಕರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಲಷ್ಕರ್ ಠಾಣಾ ಪೊಲೀಸರು ಕೂಡಲೇ
ಕಾರ್ಯಪ್ರವೃತ್ತರಾಗಿ ಸದರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅದೇ ದಿನ ದಿನಾಂಕ: 17/05/2025 ರಂದು ಇಬ್ಬರು ಅಂತ್ಯರರಾಜ್ಯ ಆರೋಪಿಗಳು ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಲಾಗಿ ಸದರಿ ಆರೋಪಿಗಳು ಲಷ್ಕರ್ ಠಾಣಾ ವ್ಯಾಪ್ತಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸೇರಿದಂತೆ ದೇವರಾಜ್ ಠಾಣಾ ವ್ಯಾಪ್ತಿಯ ಸಿಟಿ ಬಸ್ ನಿಲ್ದಾಣದಲ್ಲಿ
ಕೃತ್ಯವೆಸಗಿರುವ ಬಗ್ಗೆ ತಿಳಿಸಿದರ ಮೇರೆಗೆ ಆರೋಪಿಗಳಿಂದ ಒಟ್ಟು 17,00,000/- ಮೌಲ್ಯದ ಒಟ್ಟು 170 ಗ್ರಾಂ ತೂಕದ ನಾಲ್ಕು ಚಿನ್ನದ ಸರಗಳನ್ನು ವಶಪಡಿಸಿಕೊಂಡಿರುತ್ತಾರೆ. ಈ ಪತ್ತೆ ಕಾರ್ಯದ ಸಂಬಂಧ ಲಷ್ಕರ್ ಠಾಣೆಯ 03 ಹಾಗೂ ದೇವರಾಜ್ ಠಾಣೆಯ 01 ಪ್ರಕರಣಗಳು ಪತ್ತೆಯಾಗಿರುತ್ತದೆ.

ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗದ
ಡಿ.ಸಿ.ಪಿರವರ ಮಾರ್ಗದರ್ಶನದಲ್ಲಿ ದೇವರಾಜ ವಿಭಾಗದ ಎ.ಸಿ.ಪಿ ರವರ ಉಸ್ತುವಾರಿಯಲ್ಲಿ ಲಷ್ಕರ್ ಪೊಲೀಸ್ ಠಾಣಾ ಇನ್ಸ್ ಪ್ಟೆರ್ ಪಿ.ಎಸ್.ಐ ಹಾಗೂ ಸಿಬ್ಬಂದಿಗಳು ಮಾಡಿರುತ್ತಾರೆ.  ವರದಿ: ಬಸವಣ್ಣ

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

12 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

14 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

1 day ago