Latest

ಮೈಸೂರು: ಶಿಥಿಲ ಸೇತುವೆ ಕುಸಿತ – ಲಾರಿ ನಾಲೆಗೆ ಬಿದ್ದು ಅಪಾಯ ತಪ್ಪಿದ ಘಟನೆ!

ಮೈಸೂರು, ಆಗಸ್ಟ್ 5 – ಮೈಸೂರಿನ ಸರಗೂರು ತಾಲೂಕಿನ ಬಲದಂಡೆ ನಾಲೆ ಬಳಿ ಅತೀ ಶಿಥಿಲಗೊಂಡ ಹಳೆಯ ಸೇತುವೆ ಕುಸಿದಿದ್ದು, ತಮಿಳುನಾಡಿಗೆ ಭತ್ತ ಸಾಗಿಸುತ್ತಿದ್ದ ಲಾರಿಯೊಂದು ನದಿಗೆ ಬಿದ್ದಿದೆ. ಅದೃಷ್ಟವಶಾತ್ ಈ ಭೀಕರ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇಟ್ನ ಗ್ರಾಮದ ಬಳಿಯಿಂದ ಭತ್ತ ತುಂಬಿಕೊಂಡು ಹೊರಟಿದ್ದ TN 52 8333 ಸಂಖ್ಯೆಯ ಲಾರಿ, ರಾತ್ರಿ ವೇಳೆ ಸಂಬಂಧಿತ ನಿಷೇಧಗಳನ್ನು ಉಲ್ಲಂಘಿಸಿ ಸೇತುವೆ ಮೂಲಕ ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪೊಲೀಸ್ ಇಲಾಖೆ ಹಾಗೂ ಕಬಿನಿ ಜಲಾಶಯದ ಅಧಿಕಾರಿಗಳು ಕಳೆದ ಕೆಲವು ತಿಂಗಳಿಂದ ಈ ಸೇತುವೆಯ ಸುರಕ್ಷತೆಯ ಬಗ್ಗೆ ಎಚ್ಚರಿಕೆ ನೀಡುತ್ತಾ ಬಂದಿದ್ದರು. ಆದರೆ, ರಾತ್ರಿ ಸಮಯದಲ್ಲಿ ಬ್ಯಾರಿಕೇಡ್ ತೆರಳಿಸಿ ಲಾರಿಯು ಸೇತುವೆ ಮೂಲಕ ಸಾಗಲಾಗಿದೆ.

“ಸೇತುವೆ ಶಿಥಿಲವಾಗಿದೆ ಎಂಬ ಮಾಹಿತಿ ಇದ್ದರೂ, ನಿಯಮ ಉಲ್ಲಂಘಿಸಿ ಭಾರೀ ವಾಹನಗಳು ಅಲ್ಲಿ ಸಾಗುತ್ತಿದ್ದವು. ತೂಕದ ಬಲಕ್ಕೆ ಸೇತುವೆ ಕುಸಿತವು ಸಂಭವಿಸಿದೆ,” ಎಂದು ಕಾರ್ಯಪಾಲಕ ಅಭಿಯಂತ್ರಿ ಕೆ. ಉಷಾ ಸ್ಪಷ್ಟಪಡಿಸಿದರು.

ಘಟನೆ ನಂತರ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲವೆಂದು ಆರೋಪಿಸಿದ್ದಾರೆ. ಇದೀಗ ಈ ಸೇತುವೆ ಕುಸಿತದಿಂದ ಶ್ರೀ ಚಿಕ್ಕದೇವಮ್ಮ ಬೆಟ್ಟದ ದರ್ಶನಕ್ಕೆ ಹೋಗುವ ಪ್ರಮುಖ ಸಂಪರ್ಕ ಕಡಿದುಹೋಗಿದ್ದು, ಹತ್ತಾರು ಗ್ರಾಮಗಳ ಸಂಪರ್ಕಕ್ಕೂ ವ್ಯತ್ಯಯ ಉಂಟಾಗಿದೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago