ಮೈಸೂರು: ಪ್ರೀತಿಯ ಹೆಸರಿನಲ್ಲಿ ಘೋರ ಕ್ರೂರತೆ ನಡೆಸಿದ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರೀತಿಸಿದ ಯುವತಿಯೇ ತನ್ನ ಪ್ರೀತಿಗೆ ಸ್ಪಂದಿಸಿಲ್ಲವೆಂಬ ಕಾರಣಕ್ಕೆ ಯುವಕನೊಬ್ಬ ಆಕೆಯ ಕೊಲೆಗೈದು, ನಂತರ ಆಕೆಯ ಶವಕ್ಕೆ ತಾಳಿ ಕಟ್ಟಿ ಸೆಲ್ಫಿ ತೆಗೆದು ವಾಟ್ಸಾಪ್ ಸ್ಟೇಟಸ್‌ಗೂ ಅಪ್ಲೋಡ್ ಮಾಡಿದ ವಿಕೃತ ಪ್ರಕರಣ ಮೈಸೂರಿನ ಆಶೋಕಪುರಂನಲ್ಲಿ ನಡೆದಿದೆ.
36 ವರ್ಷದ ಪೂರ್ಣಿಮಾ ಎಂಬ ಯುವತಿಯನ್ನು ಅಭಿಷೇಕ್ ಎಂಬಾತ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈದಿದ್ದಾನೆ. ಪ್ರೀತಿಯ ನಿರಾಕರಿಸಿದ್ದರೆಂದು ಆಕ್ರೋಶಗೊಂಡ ಅಭಿಷೇಕ್, ಪೂರ್ಣಿಮಾರ ಮೇಲೆ ಹಲ್ಲೆ ನಡೆಸಿದ ವೇಳೆ ಆಕೆ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಈ ಸಂದರ್ಭ ಆಕೆಯ ಕುತ್ತಿಗೆಗೆ ತಾಳಿ ಕಟ್ಟಿದ ಆರೋಪಿ, ಬಳಿಕ ಆಕೆಯ ಶವದ ಬಳಿ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮಟ್ಟಕ್ಕೆ ವಿಕೃತ ಮನೋಭಾವ ತೋರಿಸಿದ್ದಾನೆ.
ಗಂಭೀರವಾಗಿ ಗಾಯಗೊಂಡಿದ್ದ ಪೂರ್ಣಿಮಾ ಆಸ್ಪತ್ರೆಗೆ ದಾಖಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈ ಜಗಳ ಮತ್ತು ಕೊಲೆ ಹಿಂದಿರುವ ನಿಖರ ಕಾರಣಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆರೋಪಿ ಅಭಿಷೇಕ್‌ನ ವಿರುದ್ಧ ಆಶೋಕಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಪ್ರೇಮದ ಹೆಸರಿನಲ್ಲಿ ನಡೆಯುತ್ತಿರುವ ಅಪರಾಧಗಳ ತೀವ್ರತೆಯ ಮೇಲೆ ಮತ್ತೊಂದು ಕಪ್ಪು ಮಸಿ ಬೀರುತ್ತಿದೆ.
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…