ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಗ್ರಾಮದಲ್ಲಿ 40 ವರ್ಷದ ಮಹೇಶ್ ಎಂಬ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಆದರೆ ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಅನುಮಾನಗಳು ವ್ಯಕ್ತವಾಗಿವೆ.
ಮಹೇಶ್ ಪತ್ನಿ ಪುಷ್ಪಲತಾ ಹಾಗೂ ಮನು ಕುಮಾರ್ ಎಂಬಾತನ ನಡುವೆ ಹಲವು ವರ್ಷಗಳಿಂದ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ. ಈ ವಿಚಾರ ಮಹೇಶ್‌ಗೆ ತಿಳಿದಿದ್ದು, ಇದೇ ಕಾರಣಕ್ಕೆ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಇದೀಗ ಮಹೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಕುಟುಂಬಸ್ಥರಲ್ಲಿ ಅನುಮಾನ ಮೂಡಿಸಿದೆ. ಪತ್ನಿ ಹಾಗೂ ಆಕೆಯ ಪ್ರಿಯಕರನ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪುಷ್ಪಲತಾಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನು ಮಹೇಶ್ ಸಾವಿಗೆ ಮನು ಕುಮಾರ್ ಕೂಡ ಕಾರಣನಾಗಿರಬಹುದು ಎಂದು ಆರೋಪಿಸಿರುವ ಕುಟುಂಬಸ್ಥರು, ಆತನನ್ನೂ ಕೂಡಲೇ ಬಂಧಿಸಿ ವಿಚಾರಣೆ ನಡೆಸುವಂತೆ ಆಗ್ರಹಿಸಿದ್ದಾರೆ.
ಮಹೇಶ್ ಸಾವು ಆತ್ಮಹತ್ಯೆಯೇ ಅಥವಾ ಇದರ ಹಿಂದೆ ಬೇರೆ ಕಾರಣವಿದೆಯೇ ಎಂಬುದು ಪೊಲೀಸ್ ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಸಂಸ್ಥೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ಕಾರ್ಯಾಚರಣೆ…
ದಾವಣಗೆರೆ: ಶಾಲೆಯ ಸಮವಸ್ತ್ರದಲ್ಲೇ ಅಜ್ಜಿಯ ಎದೆಗಪ್ಪಿಕೊಂಡು ಏನೂ ಅರಿಯದೆ ದಿಟ್ಟಿಸುತ್ತಿರುವ ಇಬ್ಬರು ಪುಟ್ಟ ಕಂದಮ್ಮಗಳು… “ನನ್ನ ಮಗನನ್ನು ತಂದುಕೊಡಿ” ಎಂದು…
ಪಾಕಿಸ್ತಾನದ ಜನಪ್ರಿಯ ಟಿಕ್‌ಟಾಕ್ ಸ್ಟಾರ್ ಶಂಸು ಬೀಬಿ ಅಲಿಯಾಸ್ ಆಯೆಶಾ ಗಿಲಮಾನಾ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ…
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ (42) ನಿಧನರಾಗಿರುವ ವಿಚಾರ…
ಚಿತ್ರದುರ್ಗದಲ್ಲಿ ನಡೆದ ನವವಿವಾಹಿತೆ ಸುಮಲತಾ ಕೊಲೆ ಪ್ರಕರಣಕ್ಕೆ ಇದೀಗ ಸ್ಫೋಟಕ ತಿರುವು ಸಿಕ್ಕಿದೆ. ಮದುವೆಯಾದ ಕೆಲವೇ ಗಂಟೆಗಳಲ್ಲಿ ಯುವತಿ ಅತ್ಯಾಚಾರಕ್ಕೊಳಗಾಗಿ…
ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಸುಳ್ಳು ಆರೋಪದ ಮೂಲಕ ವ್ಯಕ್ತಿಯೊಬ್ಬನನ್ನು ಜೈಲಿಗೆ ಕಳುಹಿಸಿದ ಪ್ರಕರಣದಲ್ಲಿ ನ್ಯಾಯಾಲಯ ಕಠಿಣ ನಿಲುವು ತಾಳಿದೆ. ಯುವಕನ…