Latest

ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿಯ ನಿಗೂಢ ಆತ್ಮಹತ್ಯೆ.

ಚಿಕ್ಕಬಳ್ಳಾಪುರ ಜಿಲ್ಲೆ  ಪಟ್ರೇನಹಳ್ಳಿ ಗ್ರಾಮದಲ್ಲಿ ನಡೆದ ದುರ್ಘಟನೆ ಒಂದು ಕುಟುಂಬಬೇಸರಕ್ಕೆ ದೂಡಿದೆ. ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಹೇಮಂತ್ (18) ಬುಧವಾರ ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.

ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಹೇಮಂತ್, ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ ಅವರ ಸಂಬಂಧಿಯಾಗಿ ಗುರುತಿಸಲ್ಪಟ್ಟಿದ್ದಾನೆ. ಆತ ಪಟ್ರೇನಹಳ್ಳಿಯಲ್ಲಿ ಇರುವ ತಮ್ಮ ತೋಟದ ಮನೆಯಲ್ಲಿ ಈ ದುರ್ಘಟನೆಗೆ ಕೈಹಾಕಿದ್ದಾನೆ.

ಮೂಲಗಳ ಪ್ರಕಾರ, ಹೇಮಂತ್‌ನ ತಾಯಿ ಕೂಡಾ ವೈದ್ಯೆಯಾಗಿದ್ದು, ಇತ್ತೀಚೆಗಷ್ಟೇ ವಿಯಟ್ನಾಂ ಪ್ರವಾಸ ಮುಗಿಸಿ ಮನೆಗೆ ಮರಳಿದ್ದರು. ಅವರು ಬಂದದಿನವೇ, ಬುಧವಾರ ಮಧ್ಯಾಹ್ನ 3.30ರ ವೇಳೆಗೆ ಸ್ನಾನ ಮಾಡಿದ್ದು, ಬಳಿಕ ಏನೋ ಕಾರಣಕ್ಕೋ ಆತನ ಮನಸ್ಸು ಬದಲಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆ ತಿಳಿದ ತಕ್ಷಣ ಕುಟುಂಬಸ್ಥರು ಮತ್ತು ಸಂಬಂಧಿಕರು ಕಂಬನಿ ಮಿಡಿದಿದ್ದು, ಮೃತದೇಹವನ್ನು ತಕ್ಷಣವೇ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಕರೆದೊಯ್ಯಲಾಗಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರುವವರೆಗೆ ಕುಟುಂಬದವರನ್ನು ಪ್ರಶ್ನಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಸಾಮಾನ್ಯವಾಗಿ ಚೈತನ್ಯದಿಂದ ಕೂಡಿದ್ದ ಹೇಮಂತ್ ಈ ರೀತಿಯ ನಿರ್ಧಾರ ತೆಗೆದುಕೊಂಡಿರುವುದು ಆಘಾತಕಾರಿಯಾಗಿದೆ. ಈ ಘಟನೆ ವೈದ್ಯಕೀಯ ವಿದ್ಯಾರ್ಥಿಗಳ ಮೇಲಿನ ಒತ್ತಡ ಹಾಗೂ ಮಾನಸಿಕ ಆರೋಗ್ಯದ ಕುರಿತ ಚರ್ಚೆಗೆ ಮರುಜೀವ ನೀಡುವ ಸಾಧ್ಯತೆಯಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

20 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago