ಕೊಪ್ಪ ತಾಲೂಕಿನ ಜಯಪುರದಲ್ಲಿ ಭಾರಿ ಮಳೆಗೆ ನಾಡಕಚೇರಿ ಕಟ್ಟಡ ಕುಸಿದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಕಟ್ಟಡ ಕುಸಿತದ ವೇಳೆ ಒಳಗಿದ್ದ ಸಿಬ್ಬಂದಿ ಹಾಗೂ ಸಾರ್ವಜನಿಕರು ಅಲ್ಪಕಾಲದೊಳಗೆ ಹೊರಬಂದದ್ದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ.
ಅಚ್ಚರಿಯ ಸಂಗತಿಯೆಂದರೆ, ಈ ಕಟ್ಟಡವನ್ನು ಕೇವಲ ಒಂದು ವರ್ಷದ ಹಿಂದಷ್ಟೇ ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ದುರಸ್ತಿಗೊಳಿಸಲಾಗಿತ್ತು. ಆದರೂ ಸುರಿಯುತ್ತಿರುವ ಮಳೆಗೆ ಕಟ್ಟಡ ತಡೆಯಲಾಗದೇ ಸಂಪೂರ್ಣವಾಗಿ ಕುಸಿದಿರುವುದು ಕಾಮಗಾರಿಯ ಗುಣಮಟ್ಟದ ಕುರಿತು ಪ್ರಶ್ನೆ ಎತ್ತಿದೆ.
ಘಟನೆಯ ಸಮಯದಲ್ಲಿ ಕಚೇರಿಯೊಳಗೆ ಕೆಲ ಅಧಿಕಾರಿಗಳು ಮತ್ತು ಜನರು ಇದ್ದರು. ಕಟ್ಟಡವೇ ಅಜ್ಞಾತವಾಗಿ ಬಿದ್ದಿದ್ದರಿಂದ ಗಭೀರ ಅಪಾಯ ಸಂಭವಿಸಬಹುದಾಗಿತ್ತು. ನಾಡಕಚೇರಿಯಲ್ಲಿದ್ದ ಅನೇಕ ಪ್ರಮುಖ ದಾಖಲೆಗಳು ಮಣ್ಣುಪಾಲಾಗಿವೆ.
ಈ ಕಟ್ಟಡವು ಮೂಲತಃ ಸುಮಾರು 50 ವರ್ಷ ಹಳೆಯ ಶಾಲಾ ಕಟ್ಟಡವಾಗಿದ್ದು, ನಿರ್ವಹಣೆಯಿಲ್ಲದೆ ಪಾಳು ಬಿದ್ದಿರುವುದನ್ನು ನಾಡಕಚೇರಿ ಕಾರ್ಯಲಯವಾಗಿ ಬಳಸಲಾಗುತ್ತಿತ್ತು. ಕಳೆದ ಕೆಲ ದಿನಗಳಿಂದ ಮುಗಿಲು ಮುರಿದು ಬೀಳುತ್ತಿರುವ ಮಳೆಯ ಕಾರಣವಾಗಿ ಕಟ್ಟಡದ ಗೋಡೆಗಳು ತೇವದಿಂದ ಬಡಬಡಿಹೋಗಿ ಕೊನೆಗೆ ಧರೆಗುರುಳಿವೆ.
ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಾತ್ಕಾಲಿಕವಾಗಿ ಕಾರ್ಯಲಯದ ವ್ಯವಸ್ಥೆ ಮಾಡಲು ಮುಂದಾಗಿದ್ದಾರೆ.ಜನತೆ ಸುರಕ್ಷಿತ ಮತ್ತು ಶಾಶ್ವತ ನಾಡಕಚೇರಿ ಕಟ್ಟಡಕ್ಕಾಗಿ ಆಗ್ರಹ ವ್ಯಕ್ತಪಡಿಸುತ್ತಿದ್ದಾರೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…