Latest

ಜೋಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಒಬ್ಬ ಆರೋಪಿ ಆತ್ಮಹತ್ಯೆ, ಮತ್ತೊಬ್ಬ ಆರೋಪಿಗೆ ಪೊಲೀಸ್ ರಕ್ಷಣೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ತಾಯಿ ಹಾಗೂ ಮಗನನ್ನು ಹತ್ಯೆಗೊಳಿಸಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಮುಖ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮತ್ತೊಬ್ಬ ಆರೋಪಿ ಆತ್ಮಹತ್ಯೆ ಮಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಸಮಯೋಚಿತ ರೀತಿ ಜವಾಬ್ದಾರಿ ವಹಿಸಿ ರಕ್ಷಿಸಿದ್ದಾರೆ.

ಕೊಲೆಗೀಡಾದವರು ಚಂದ್ರವ್ವ ಇಚೇರಿ (62) ಮತ್ತು ವಿಠ್ಠಲ ಇಚೇರಿ (42) ಎಂಬ ತಾಯಿ-ಮಗ ಜೋಡಿ. ಇಬ್ಬರನ್ನು ಭೀಕರವಾಗಿ ಕತ್ತು ಹಿಸುಕುವ ಮೂಲಕ ಹತ್ಯೆಗೈಯಲಾಗಿದೆ. ಈ ಕ್ರೂರ ಕೃತ್ಯಕ್ಕೆ ಸಂಬಂಧಿಸಿದಂತೆ ಸುರೇಶ್ ಸವದತ್ತಿ ಮತ್ತು ಶ್ರೀಶೈಲ ಹೊರಟ್ಟಿ ಎಂಬ ಇಬ್ಬರು ವಿರುದ್ಧ ಆರೋಪ ಕೇಳಿಬಂದಿದ್ದವು.

ಅಳಿಯನಾದ ಸುರೇಶ್ ಸವದತ್ತಿಗೆ ಚಂದ್ರವ್ವ ಅವರ ಆಸ್ತಿ ಮೇಲೆ ಆಸೆ ಇದ್ದುದರಿಂದಲೇ ಈ ದ್ವಿತಯ ಹತ್ಯೆ ನಡೆದಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ. ತನ್ನ ಸ್ನೇಹಿತ ಶ್ರೀಶೈಲನ ಸಹಾಯದಿಂದ ಈ ಕೃತ್ಯ ನೆರವೇರಿಸಿದ್ದ ಎನ್ನಲಾಗಿದೆ.

ಪೊಲೀಸರು ತನಿಖೆ ಆಳವಾಗಿಸುತ್ತಿದ್ದಂತೆಯೇ, ಆರೋಪಿ ಸುರೇಶ್ ಶೇಗುಣಸಿ ಗ್ರಾಮದ ಹೊರವಲಯದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಮೂಲಕ ಕಾನೂನಿನ ಕೈಗಳಿಂದ ತಪ್ಪಿಸಿಕೊಳ್ಳಲು ಜೀವವನ್ನೇ ತ್ಯಜಿಸಿದ್ದಾನೆ.

ಇನ್ನೊಂದು ಕಡೆ, ಆರೋಪಿ ಶ್ರೀಶೈಲ ಹೊರಟ್ಟಿ ಕೂಡ ಬಂಧನದ ಭೀತಿಯಲ್ಲಿ ತನ್ನ ಮನೆಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸಮಯಕ್ಕಿಂತ ಮೊದಲು ಸ್ಥಳಕ್ಕೆ ಧಾವಿಸಿದ ಪೊಲೀಸರು ಅವನನ್ನು ಜೀವಂತವಾಗಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ದ್ವಿತಯ ಕೊಲೆ ಪ್ರಕರಣದಿಂದ ನಂದಗಾಂವ ಗ್ರಾಮದಲ್ಲಿ ಭಾರೀ ಭೀತಿಯ ವಾತಾವರಣವಿದ್ದು, ಪೊಲೀಸರು ಮುಂದಿನ ಕ್ರಮವಾಗಿ ಘಟನೆ ಕುರಿತ ತನಿಖೆಯನ್ನು ಗಂಭೀರವಾಗಿ ಮುಂದುವರೆಸಿದ್ದಾರೆ.

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

5 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

9 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

12 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

17 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

2 days ago