ಮೈಸೂರು: ನಂಜನಗೂಡು ಕಾವೇರಿ ನೀರಾವರಿ ನಿಗಮದ ಕಚೇರಿಯಲ್ಲಿ ₹1.45 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯನಿರ್ವಾಹಕ ಎಂಜಿನಿಯರ್ ಕಾವೇರಿ ರಂಗನಾಥ್ ಹಾಗೂ ಅಕೌಂಟ್ ಸೂಪರಿಂಟೆಂಡೆಂಟ್ ಉಮಾ ಮಹೇಶ್ ಅವರನ್ನು ಲೋಕಾಯುಕ್ತ ಪೊಲೀಸರು ಸೆರೆಹಿಡಿದಿದ್ದಾರೆ.
2022ರಲ್ಲಿ ನಾಳೆ ದುರಸ್ತಿಗೆ ಸಂಬಂಧಿಸಿದ ₹23 ಲಕ್ಷ ಮೌಲ್ಯದ ಕಾಮಗಾರಿ ಪೂರ್ಣಗೊಳಿಸಿದ್ದ ಗುತ್ತಿಗೆದಾರ ಅಬ್ದುಲ್ ಅಜೀಜ್ ಅವರ ಬಿಲ್ ಬಿಡುಗಡೆಗೆ ಈ ಇಬ್ಬರು ಅಧಿಕಾರಿಗಳು ಶೇ.6 ರಷ್ಟು ಲಂಚ ಬೇಡಿದ್ದರು. ಹೀಗಾಗಿ ಗುತ್ತಿಗೆದಾರರು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಿಸಿದರು.
ದೂರಿನ ಮೇರೆಗೆ ಚಾಮರಾಜನಗರ ಲೋಕಾಯುಕ್ತ ಡಿವೈಎಸ್‌ಪಿ ಮ್ಯಾಥ್ಯೂ ಥಾಮಸ್ ಅವರ ಮಾರ್ಗದರ್ಶನದಲ್ಲಿ, ಮೈಸೂರು ಲೋಕಾಯುಕ್ತ ಇನ್‌ಸ್ಪೆಕ್ಟರ್ ರವಿಕುಮಾರ್ ಹಾಗೂ ಚಾಮರಾಜನಗರದ ಇನ್‌ಸ್ಪೆಕ್ಟರ್ ಶಶಿಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹತ್ತಿಕ್ಕಿತು.
ಈ ಸಂಬಂಧ ಪ್ರಕರಣ ದಾಖಲಾಗಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳ ಲಂಚ ಬೇಡಿಕೆ ಮತ್ತು ಸೆರೆಹಿಡಿಯಲಾದ ವಿಧಾನವನ್ನು ಸಾರ್ವಜನಿಕ ವಲಯದಲ್ಲಿ ತೀವ್ರವಾಗಿ ಟೀಕಿಸಲಾಗುತ್ತಿದೆ.
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…