Crime

ನಂಜುಂಡೇಶ್ವರನ ಹರಕೆ ಗೂಳಿಯ ಬಾಲ ಕತ್ತರಿಸಿ ಅಟ್ಟಹಾಸ ಮೆರೆದಿರುವ ಕಿರಾತಕರು..!

ನಂಜನಗೂಡು: ಇತ್ತೀಚೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕಿಡಿಗೇಡಿಯೊಬ್ಭ ಹಸುವೊಂದರ ಕೆಚ್ಚಲು ಕುಯ್ದ ಕಹಿ ಘಟನೆ ಮಾಸುವ ಮುನ್ನವೇ ಸಿಎಂ ತವರು ನಂಜನಗೂಡಿನಲ್ಲೂ ಮೂಕ ಪ್ರಾಣಿ ಗೂಳಿಯೊಂದರ ಬಾಲ ಕತ್ತರಿಸಿ ಕ್ರೌರ್ಯಮೆರೆದಿರುವ ಘಟನೆ ಮರುಕಳಿಸಿದೆ.
ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಅಂದರೆ ಶ್ರೀ ನಂಜುಂಡೇಶ್ವರನಿಗೆ ಭಕ್ತರು ಬಿಟ್ಟಿದ್ದ ಹರಕೆ ಗೂಳಿ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಗೂಳಿಯ ಬಾಲ ಕತ್ತರಿಸಿರುವ ಅಮಾನವೀಯ ಘಟನೆ ಜರುಗಿದೆ ಸನಾತನ ಹಾಗೂ ಹಿಂದೂ ಧರ್ಮದ ದಲ್ಲಿ ಪೂಜ್ಯನೀಯ ಸ್ಥಾನದಲ್ಲಿರುವ ಗೋಮಾತೆ ಹಾಗೂ ಬಸವಗಳಿಗೆ ಈ ರೀತಿ ಚಿತ್ರಹಿಂಸೆ ನೀಡುವುದು ವಿಷಾದನೀಯ ಘಟನೆಯಾಗಿದೆ
ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸಮೀಪದಲ್ಲೇ ಇರುವ ಹಳ್ಳದಕೇರಿ ಬಡಾವಣೆಯ ಬಳಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಓಡಾಡಿಕೊಂಡು ನಿಂತಿದ್ದ ಹರಕೆ ಗೂಳಿಯ ಬಾಲವನ್ನು ಮಚ್ಚಿನಿಂದ ಕೊಚ್ಚಿದ್ದಾರೆ.
ಇದರಿಂದಾಗಿ ಬಾಲವು ತುಂಡಾಗಿ ಬಿದ್ದಿದ್ದು, ಗೂಳಿ ರಕ್ತದ ಮಡುವಿನಲ್ಲಿ ಬಿದ್ದು ನರಲಾಡುತ್ತಿತ್ತು
ಇದನ್ನು ಕಂಡ ಗೋಳೂರು ಸ್ನೇಕ್ ಬಸವರಾಜು, ದೇವರಸನಹಳ್ಳಿ ರಾಮಕೃಷ್ಣ, ಪೈಲ್ವಾನ್ ಆದಿ ಸೇರಿದಂತೆ ಪಶು ವೈದ್ಯರು ಗೂಳಿಗೆ ಚಿಕಿತ್ಸೆನೀಡಿ ರಕ್ಷಣೆ ಮಾಡಿದ್ದಾರೆ.
ಘಟನೆಗೆ ಕಾರಣ ತಿಳಿದು ಬಂದಿಲ್ಲ ಆದರೂ ಇಂತಹ ಅಮಾನವೀಯ ಘಟನೆಗೆ ಕಾರಣರಾದವರನ್ನು ಪೊಲೀಸರು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ
ವಿಷಯ ತಿಳಿದು ಸ್ಥಳಕ್ಕೆ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಸ್ಥಳಕ್ಕೆ ಎಸ್ ಪಿ ವಿಷ್ಣುವರ್ಧನ್ ಭೇಟಿ

ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಬಿಡುವ ಹರಕೆ ಗೂಳಿಯ ಬಾಲವನ್ನು ತುಂಡರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಎಸ್ ಪಿ ನಂಜನಗೂಡು ನಗರದ ಹಳ್ಳದ ಕೇರಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಈಗಾಗಲೇ ನಮ್ಮ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಸುಮೊಟೊ ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಡಿವೈಎಸ್ಪಿ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ.
ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು ಘಟನೆ ನಡೆದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಿಸಿ ಕ್ಯಾಮರಗಳನ್ನು ಪರಿಶೀಲಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ವಿಷ್ಣುವರ್ಧನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

17 seconds ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

5 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

20 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago