Latest

ಚಿಕ್ಕಮಗಳೂರಿನಲ್ಲಿ ನಕ್ಸಲ್ ಅಧ್ಯಾಯ ಅಂತ್ಯ: ಕೊನೆಗೂ ಶರಣಾದ ಕೋಟೆಹೊಂಡ ರವೀಂದ್ರ

ಚಿಕ್ಕಮಗಳೂರು ಜಿಲ್ಲೆಯ ಕಾಫಿನಾಡು ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ಇಂದು ಅಂತಿಮ ತೆರೆಬಿದ್ದಿದೆ. ಶೃಂಗೇರಿಯ ಕೋಟೆಹೊಂಡ ಗ್ರಾಮದ ನಿವಾಸಿ ರವೀಂದ್ರ, ಕೆಂಪು ಉಗ್ರರ ಕೊನೆಯ ಪ್ರತಿನಿಧಿಯಾಗಿ, ಸ್ವಯಂ ಪ್ರೇರಿತವಾಗಿ ಪೊಲೀಸರು ಮುಂದೆ ಶರಣಾಗಿದ್ದಾರೆ.

ರವೀಂದ್ರ ಅವರು ನಾಗರಿಕ ಶಾಂತಿ ವೇದಿಕೆ ಸದಸ್ಯರ ಜತೆ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಎದುರು ಶರಣಾಗಿದ್ದು, ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಅವರು, ಸಮಾಧಾನಕರ ಜೀವನಕ್ಕೆ ಮರಳಲು ನಿರ್ಧಾರ ಮಾಡಿರುವುದು ಮಹತ್ವದ್ದಾಗಿದೆ.

ಜನವರಿ 8 ರಂದು, ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ 6 ಜನ ನಕ್ಸಲರು ಶರಣಾಗಿದ್ದರು. ಇದರಿಂದಾಗಿ, ಜಿಲ್ಲೆಯಲ್ಲಿ ನಕ್ಸಲ್ ಪ್ರಭಾವ ಕಡಿಮೆಯಾಗಿದ್ದು, ಕಾಡಿನೊಳಗಿನ ಮುಟ್ಟಿಯಾಗಿದ್ದ ಕೊನೆಯ ನಕ್ಸಲ್ ರವೀಂದ್ರನ ಶರಣಾಗತಿಯೊಂದಿಗೆ ಈ ಚಳುವಳಿ ಸಂಪೂರ್ಣ ಕೊನೆಗೊಂಡಂತಾಗಿದೆ.

ಈ ಬೆಳವಣಿಗೆಯಿಂದ, ಚಿಕ್ಕಮಗಳೂರಿನ ಜನತೆ ನಿರಾಳತೆ ಅನುಭವಿಸುವ ನಿರೀಕ್ಷೆ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆ ಸಹ ಶಾಂತಿ ಸ್ಥಾಪನೆಗಾಗಿ ಮತ್ತಷ್ಟು ಕ್ರಮ ಕೈಗೊಳ್ಳಲಿದೆ.

nazeer ahamad

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

2 days ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

2 days ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

6 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

6 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

6 days ago