
ಬೀದರ್: ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಗಂಭೀರ ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ ಬೀದರ್ ತಾಲ್ಲೂಕಿನ ಬಗದಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಮಡಯ್ಯಾ ಸ್ವಾಮಿ ಅವರನ್ನು ಅಮಾನತುಗೊಳಿಸಲಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕರು ನೀಡಿರುವ ಆದೇಶದಲ್ಲಿ, ಅಮಾನತು ಅವಧಿಯಲ್ಲಿ ಕೇಂದ್ರ ಸ್ಥಾನವನ್ನು ತೊರೆಯುವ ಮುನ್ನ ಸಕಷ್ಟ ಪ್ರಾಧಿಕಾರದ ಅನುಮತಿ ಪಡೆಯುವುದು ಕಡ್ಡಾಯವೆಂದು ಸ್ಪಷ್ಟವಾಗಿ ಹೇಳಲಾಗಿದೆ.
ಈ ಕ್ರಮಕ್ಕೆ ಕಾರಣವಾದ ಘಟನೆ ಆಗಸ್ಟ್ 7ರಂದು ನಡೆದಿದೆ. ಶಾಲೆಯ ಆರನೇ ತರಗತಿಯ ವಿದ್ಯಾರ್ಥಿ ರೋಹನ ರಾಬರ್ಟ್ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ ಗೋಡೆ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಬಾಲಕನ ತಲೆಗೆ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವ ಉಂಟಾಗಿತ್ತು.
ಘಟನೆಯ ಬಳಿಕ ಶಾಲೆಯ ಮೂಲಸೌಕರ್ಯ ಸಂಬಂಧಿತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿರುವುದು ಬೆಳಕಿಗೆ ಬಂದಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಿದ ಇಲಾಖೆ ಮುಖ್ಯಶಿಕ್ಷಕರ ವಿರುದ್ಧ ತಕ್ಷಣವೇ ಅಮಾನತು ಕ್ರಮ ಜರುಗಿಸಿದೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392