Latest

ಶಾಲಾ ಸುರಕ್ಷತಾ ನಿರ್ಲಕ್ಷ್ಯ: ಬಗದಲ್‌ ಮುಖ್ಯಶಿಕ್ಷಕ ಅಮಾನತು

ಬೀದರ್‌: ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಗಂಭೀರ ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ ಬೀದರ್‌ ತಾಲ್ಲೂಕಿನ ಬಗದಲ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಮಡಯ್ಯಾ ಸ್ವಾಮಿ ಅವರನ್ನು ಅಮಾನತುಗೊಳಿಸಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕರು ನೀಡಿರುವ ಆದೇಶದಲ್ಲಿ, ಅಮಾನತು ಅವಧಿಯಲ್ಲಿ ಕೇಂದ್ರ ಸ್ಥಾನವನ್ನು ತೊರೆಯುವ ಮುನ್ನ ಸಕಷ್ಟ ಪ್ರಾಧಿಕಾರದ ಅನುಮತಿ ಪಡೆಯುವುದು ಕಡ್ಡಾಯವೆಂದು ಸ್ಪಷ್ಟವಾಗಿ ಹೇಳಲಾಗಿದೆ.

ಈ ಕ್ರಮಕ್ಕೆ ಕಾರಣವಾದ ಘಟನೆ ಆಗಸ್ಟ್‌ 7ರಂದು ನಡೆದಿದೆ. ಶಾಲೆಯ ಆರನೇ ತರಗತಿಯ ವಿದ್ಯಾರ್ಥಿ ರೋಹನ ರಾಬರ್ಟ್‌ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ ಗೋಡೆ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಬಾಲಕನ ತಲೆಗೆ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವ ಉಂಟಾಗಿತ್ತು.

ಘಟನೆಯ ಬಳಿಕ ಶಾಲೆಯ ಮೂಲಸೌಕರ್ಯ ಸಂಬಂಧಿತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿರುವುದು ಬೆಳಕಿಗೆ ಬಂದಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಿದ ಇಲಾಖೆ ಮುಖ್ಯಶಿಕ್ಷಕರ ವಿರುದ್ಧ ತಕ್ಷಣವೇ ಅಮಾನತು ಕ್ರಮ ಜರುಗಿಸಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

13 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

17 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago