ಬೆಂಗಳೂರು: ಪಕ್ಕದ ಮನೆಯಲ್ಲಿ ವಾಸವಾಗಿದ್ದ ಮಹಿಳಾ ಟೆಕಿ ಸ್ನಾನ ಮಾಡುತ್ತಿದ್ದ ವೇಳೆ ಗುಪ್ತವಾಗಿ ವಿಡಿಯೋ ಚಿತ್ರೀಕರಣ ಮಾಡಿದ್ದ ಆರೋಪದ ಮೇಲೆ ಮಹದೇವಪುರ ಠಾಣೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ಕಾರ್ತಿಕ್ (30) ಬಂಧಿತ ಆರೋಪಿ. ಈತ ಮಹದೇವಪುರದ ಗರುಡಾಚಾರ್ ಪಾಳ್ಯದಲ್ಲಿ ವಾಸವಾಗಿದ್ದ ಎನ್ನಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, 23 ವರ್ಷದ ಮಹಿಳಾ ಟೆಕಿ ಪಕ್ಕದ ಕಟ್ಟಡದಲ್ಲಿ ವಾಸವಾಗಿದ್ದರು. ಏಪ್ರಿಲ್ 29ರಂದು ರಾತ್ರಿ ಯುವತಿ ಸ್ನಾನ ಮಾಡುತ್ತಿದ್ದ ವೇಳೆ, ಆರೋಪಿ ಕಾರ್ತಿಕ್ ತನ್ನ ಮನೆಯ ಕಟ್ಟಡದ ಮೇಲ್ಭಾಗದಲ್ಲಿ ನಿಂತು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವಿಚಾರ ಗಮನಿಸಿದ ಮಹಿಳೆ ಜೋರಾಗಿ ಕೂಗಿಕೊಂಡಿದ್ದು, ಬಳಿಕ ಘಟನೆ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಮಹದೇವಪುರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Related News

error: Content is protected !!