ಬೆಂಗಳೂರು: ಪಕ್ಕದ ಮನೆಯಲ್ಲಿ ವಾಸವಾಗಿದ್ದ ಮಹಿಳಾ ಟೆಕಿ ಸ್ನಾನ ಮಾಡುತ್ತಿದ್ದ ವೇಳೆ ಗುಪ್ತವಾಗಿ ವಿಡಿಯೋ ಚಿತ್ರೀಕರಣ ಮಾಡಿದ್ದ ಆರೋಪದ ಮೇಲೆ ಮಹದೇವಪುರ ಠಾಣೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ಕಾರ್ತಿಕ್ (30) ಬಂಧಿತ ಆರೋಪಿ. ಈತ ಮಹದೇವಪುರದ ಗರುಡಾಚಾರ್ ಪಾಳ್ಯದಲ್ಲಿ ವಾಸವಾಗಿದ್ದ ಎನ್ನಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, 23 ವರ್ಷದ ಮಹಿಳಾ ಟೆಕಿ ಪಕ್ಕದ ಕಟ್ಟಡದಲ್ಲಿ ವಾಸವಾಗಿದ್ದರು. ಏಪ್ರಿಲ್ 29ರಂದು ರಾತ್ರಿ ಯುವತಿ ಸ್ನಾನ ಮಾಡುತ್ತಿದ್ದ ವೇಳೆ, ಆರೋಪಿ ಕಾರ್ತಿಕ್ ತನ್ನ ಮನೆಯ ಕಟ್ಟಡದ ಮೇಲ್ಭಾಗದಲ್ಲಿ ನಿಂತು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವಿಚಾರ ಗಮನಿಸಿದ ಮಹಿಳೆ ಜೋರಾಗಿ ಕೂಗಿಕೊಂಡಿದ್ದು, ಬಳಿಕ ಘಟನೆ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಮಹದೇವಪುರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…