Categories: Latest

ಸರ್ಕಾರಿ ನೌಕರರಿಗೆ ಹೊಸ ನಿಯಮ: ಮುಂಬಡ್ತಿಗೆ ತರಬೇತಿ ಕಡ್ಡಾಯ

ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ ಪಡೆಯಬೇಕಾದರೆ ನಿಗದಿತ ತರಬೇತಿಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಲಿದೆ. ಈ ನಿಯಮಗಳನ್ನು “ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಮುಂಬಡ್ತಿಗಾಗಿ ತರಬೇತಿ ಕಡ್ಡಾಯ) ನಿಯಮಗಳು, 2026” ಎಂದು ಹೆಸರಿಸಲಾಗಿದೆ.

ಈ ನಿಯಮವು ಗ್ರೂಪ್-ಎ, ಗ್ರೂಪ್-ಬಿ ಹಾಗೂ ಗ್ರೂಪ್-ಸಿ ಹುದ್ದೆಗಳಲ್ಲಿರುವ ಎಲ್ಲಾ ಸರ್ಕಾರಿ ನೌಕರರಿಗೆ ಅನ್ವಯಿಸುತ್ತದೆ. ಆದರೆ ಗ್ರೂಪ್-ಸಿ ವಿಭಾಗದ ಚಾಲಕರು ಹಾಗೂ ಗ್ರೂಪ್-ಡಿ ನೌಕರರಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಅಧಿಸೂಚನೆಯ ಪ್ರಕಾರ, ತರಬೇತಿಯನ್ನು ಆನ್‌ಲೈನ್, ಆಫ್‌ಲೈನ್ ಅಥವಾ ಹೈಬ್ರಿಡ್ ಮಾದರಿಯಲ್ಲಿ ನೀಡಲಾಗುತ್ತದೆ. ಮುಂಬಡ್ತಿ ಪಡೆಯಲು ಈ ತರಬೇತಿಯನ್ನು ಪೂರ್ಣಗೊಳಿಸುವುದು ಹೆಚ್ಚುವರಿ ಅರ್ಹತೆಯಾಗಿ ಪರಿಗಣಿಸಲಾಗುತ್ತದೆ. ತರಬೇತಿ ಪ್ರಕಟವಾದ ದಿನಾಂಕದಿಂದ 6 ತಿಂಗಳೊಳಗೆ ಅದನ್ನು ಪೂರ್ಣಗೊಳಿಸದಿದ್ದರೆ, ನೌಕರರು ಮುಂಬಡ್ತಿಗೆ ಅರ್ಹರಾಗುವುದಿಲ್ಲ. ಆದರೆ ನಿವೃತ್ತಿಗೆ ಇನ್ನೂ ಎರಡು ವರ್ಷ ಮಾತ್ರ ಬಾಕಿ ಇರುವ ನೌಕರರಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ.

ಇದಲ್ಲದೆ, ಬಡ್ತಿಗೆ ಮುನ್ನ ಕನಿಷ್ಠ 10 ದಿನಗಳ ಆಫ್‌ಲೈನ್ ತರಬೇತಿಯನ್ನು ಪಡೆಯುವುದು ಕಡ್ಡಾಯವಾಗಿದ್ದು, ಜೊತೆಗೆ ಆನ್‌ಲೈನ್ ತರಬೇತಿ ಕೋರ್ಸ್‌ಗಳನ್ನು ಪೂರ್ಣಗೊಳಿಸಬೇಕಾಗುತ್ತದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚಿಸಿದಂತೆ, ನೌಕರರು ಪ್ರತಿ ವರ್ಷ ನಿಗದಿತ ಅಂಕಗಳನ್ನು ಆನ್‌ಲೈನ್ ವೇದಿಕೆಯಲ್ಲಿ ಗಳಿಸಬೇಕು.

ಪ್ರತಿ ಇಲಾಖೆಯ ಮುಖ್ಯಸ್ಥರು ತರಬೇತಿ ಕೋರ್ಸ್‌ಗಳನ್ನು ರೂಪಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳಲಿದ್ದು, ಅಗತ್ಯವಿದ್ದರೆ ಸಲಹಾ ಸಮಿತಿಗಳನ್ನು ರಚಿಸಿ ತರಬೇತಿ ವ್ಯವಸ್ಥೆ ಮಾಡಲಿದ್ದಾರೆ. ಜೊತೆಗೆ, ಇಂಟಿಗ್ರೇಟೆಡ್ ಗವರ್‍ನ್ಮೆಂಟ್ ಆನ್‌ಲೈನ್ ಟ್ರೈನಿಂಗ್ (iGOT) ವೇದಿಕೆಯ ಮೂಲಕ ನೌಕರರು ತರಬೇತಿಗೆ ಅರ್ಜಿ ಸಲ್ಲಿಸಬೇಕು.

ಈ ಹೊಸ ನಿಯಮದಿಂದ ಸರ್ಕಾರಿ ನೌಕರರ ಕೌಶಲ್ಯಾಭಿವೃದ್ಧಿ ಹೆಚ್ಚುವ ನಿರೀಕ್ಷೆಯಿದ್ದು, ಮುಂಬಡ್ತಿಯಲ್ಲಿ ಪಾರದರ್ಶಕತೆ ತರಲು ಸಹಾಯವಾಗಲಿದೆ.

ಭ್ರಷ್ಟರ ಬೇಟೆ

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

23 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago