Categories: CrimeLatest

ಭಟ್ಕಳ ಘಟನೆಗೆ ಹೊಸ ತಿರುವು: ಯುವತಿಯ ದೂರಿನ ಮೇರೆಗೆ ಮುಸ್ಲಿಂ ಯುವಕ ಬಂಧನ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಮಹಿಳಾ ಸಹೋದ್ಯೋಗಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕಾರಿನಲ್ಲಿ ಕರೆದೊಯ್ದ ಆರೋಪದ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಪ್ರಕರಣವು ಸ್ಥಳೀಯ ಮಟ್ಟದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಕೆಲ ಸಂಘಟನೆಗಳು ಪ್ರತಿಭಟನೆಯನ್ನೂ ನಡೆಸಿವೆ.

ಮಾಹಿತಿಯ ಪ್ರಕಾರ, ಭಟ್ಕಳದ ಖಾಸಗಿ ಸೂಪರ್ ಮಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಹಾಗೂ ಸಹೋದ್ಯೋಗಿಯಾಗಿದ್ದ ಶಾಹಿದ್ ಸೈಫ್ ಖಾನ್ ನಡುವೆ ಪರಿಚಯವಿತ್ತು ಎನ್ನಲಾಗಿದೆ. ಯುವತಿಯ ದೂರಿನ ಪ್ರಕಾರ, ಆರೋಪಿ ಕಳೆದ ಕೆಲವು ದಿನಗಳಿಂದ ಆಕೆಯನ್ನು ನಿರಂತರವಾಗಿ ಸಂಪರ್ಕಿಸುತ್ತಿದ್ದ ಹಾಗೂ ಒತ್ತಡ ಹೇರುತ್ತಿದ್ದ ಎಂದು ಆರೋಪಿಸಲಾಗಿದೆ.

ಜೂನ್ 17ರಂದು ಮಾತನಾಡಬೇಕಿದೆ ಎಂದು ಹೇಳಿ ಯುವತಿಯನ್ನು ಸೂಪರ್ ಮಾರ್ಟ್ ಹಿಂಭಾಗದ ಪ್ರದೇಶಕ್ಕೆ ಕರೆಸಿಕೊಂಡಿದ್ದ ಆರೋಪಿ, ಬಳಿಕ ಆಕೆಯನ್ನು ಕಾರಿನಲ್ಲಿ ಕೂರಿಸಿಕೊಂಡು ಕಾಡು ಪ್ರದೇಶದತ್ತ ಕರೆದೊಯ್ದಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಾರುಕೇರಿ ಭಾಗದ ಕಡೆಗೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಾರನ್ನು ಸ್ಥಳೀಯರು ತಡೆದಿದ್ದು, ಬಳಿಕ ಯುವತಿ ತನ್ನನ್ನು ಇಚ್ಛೆಗೆ ವಿರುದ್ಧವಾಗಿ ಕರೆದೊಯ್ಯಲಾಗಿದೆ ಹಾಗೂ ಕಿರುಕುಳ ನೀಡಲು ಯತ್ನಿಸಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾಳೆ ಎಂದು ತಿಳಿದುಬಂದಿದೆ.

ಪ್ರಕರಣದ ಆರಂಭಿಕ ಹಂತದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಕೆಲವು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಯುವತಿಯ ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಶಾಹಿದ್ ಸೈಫ್ ಖಾನ್ ಅವರನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಎಲ್ಲ ಆಯಾಮಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

39 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago