Categories: CorruptionCrimeLatest

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪೊಲೀಸರಿಂದ ‘ಹಣದ ಬೇಡಿಕೆ, ಕಿರುಕುಳ’ ಆರೋಪ..!

ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ ಹೊಸ ಆರೋಪಗಳು ಕೇಳಿಬಂದಿವೆ. ಗಾಂಜಾ ಸೇವನೆ ಮಾಡಿಲ್ಲವೆಂದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದರೂ, ಸುಳ್ಳು ಆರೋಪ ಹೊರಿಸಿ ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮೂಲಗಳ ಪ್ರಕಾರ, ಕೆಲವು ದಿನಗಳ ಹಿಂದೆ ನಡೆದ ಗಾಂಜಾ ದಾಳಿಯಲ್ಲಿ ಆದಿತ್ಯ ಸೇರಿ ಹತ್ತಕ್ಕೂ ಹೆಚ್ಚು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿಲ್ಲವೆಂದು ವರದಿ ಬಂದರೂ, ಈ ಪ್ರಕರಣದಲ್ಲಿ ತಲಾ ₹10,000 ರೂಪಾಯಿ ಹಣವನ್ನು ಮಧ್ಯವರ್ತಿಯ ಮೂಲಕ ಫೋನ್‌ಪೇ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದಷ್ಟೇ ಅಲ್ಲದೆ, ಕಳೆದ ಎರಡು ದಿನಗಳಿಂದ ಆದಿತ್ಯನಿಗೆ ಮತ್ತೆ ₹2,000 ರೂಪಾಯಿ ನೀಡುವಂತೆ ಪದೇಪದೇ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. ಪೊಲೀಸರ ಈ ನಿರಂತರ ಒತ್ತಡ ಮತ್ತು ಹಣದಾಸೆಯನ್ನು ತಡೆಯಲಾಗದೆ ಆದಿತ್ಯ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಮೃತ ಆದಿತ್ಯ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬೇಲೂರು ಗ್ರಾಮದ ನಿವಾಸಿಯಾಗಿದ್ದು, ತಂದೆಯನ್ನು ಕಳೆದುಕೊಂಡ ನಂತರ ತಾಯಿ ಕವಿತಾ ಅವರು ಕಷ್ಟಪಟ್ಟು ಮಗನನ್ನು ಸಾಕಿ ಬೆಳೆಸಿದ್ದರು. ಮಗನ ಸಾವಿಗೆ ಪೊಲೀಸರೇ ಕಾರಣ ಎಂದು ತಾಯಿ ಆಕ್ರಂದನ ವ್ಯಕ್ತಪಡಿಸಿದ್ದು, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂಬಂಧ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

12 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

16 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago