Categories: CrimeLatest

ಜಿಮ್ ಟ್ರೈನರ್ ವಿಜಯ್ ಹತ್ಯೆ ಪ್ರಕರಣಕ್ಕೆ ಹೊಸ ತಿರುವು; ಪ್ರಭಾವಿ ಉದ್ಯಮಿ ಪುತ್ರಿಯೊಂದಿಗೆ ಪ್ರೇಮ ಸಂಬಂಧ ತನಿಖೆಯಲ್ಲಿ ಬಹಿರಂಗ

ಆನೇಕಲ್‌ನಲ್ಲಿ ನಡೆದ ಜಿಮ್ ಟ್ರೈನರ್ ವಿಜಯ್ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಭಾವಿ ಉದ್ಯಮಿಯ ಪುತ್ರಿಯೊಂದಿಗಿನ ಪ್ರೇಮ ಸಂಬಂಧವೇ ಹತ್ಯೆಗೆ ಕಾರಣವಾಗಿರಬಹುದು ಎಂಬ ಅನುಮಾನಗಳು ತನಿಖೆಯಲ್ಲಿ ಕೇಳಿಬರುತ್ತಿವೆ. ಪ್ರಕರಣ ಸಂಬಂಧ ಈಗಾಗಲೇ ನಾಲ್ವರನ್ನು ಬಂಧಿಸಿರುವ ಬನ್ನೇರುಘಟ್ಟ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದ ವಿಜಯ್ ಕೆಲವು ವರ್ಷಗಳ ಹಿಂದೆ ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಕೆ.ಆರ್.ಪುರಂನ ಜಿಮ್‌ನಲ್ಲಿ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದನು. ಸುಮಾರು ಹತ್ತು ದಿನಗಳ ಹಿಂದೆ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಕಾಳೇಶ್ವರಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ವಿಜಯ್ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಲ್ ಡಿಟೇಲ್ಸ್, ಸಿಡಿಆರ್ ಹಾಗೂ ಲೊಕೇಶನ್ ಟವರ್ ಡಂಪ್ ಸೇರಿದಂತೆ ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ಆನೇಕಲ್ ಮೂಲದ ಶ್ರೀರಾಮ್, ಸುಮಿತ್, ವೆಂಕಟೇಶಯ್ಯ ಮತ್ತು ಬಾಬು ಎಂಬ ನಾಲ್ವರನ್ನು ಬಂಧಿಸಿದ್ದಾರೆ.

ಮೃತ ವಿಜಯ್ ಕುಟುಂಬದವರ ಆರೋಪದ ಪ್ರಕಾರ, ವಿಜಯ್‌ಗೆ ಉದ್ಯಮಿ ಕಾಮಿನೇನಿ ಪ್ರಸಾದ್ ಅವರ ಪುತ್ರಿಯೊಂದಿಗೆ ಆಪ್ತ ಸಂಬಂಧವಿದ್ದು, ಇದೇ ವಿಚಾರದಿಂದ ವೈಮನಸ್ಸು ಉಂಟಾಗಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಕುಟುಂಬಸ್ಥರು ಕೋಟ್ಯಂತರ ರೂಪಾಯಿ ಸುಪಾರಿ ನೀಡಿ ಹತ್ಯೆ ನಡೆಸಲಾಗಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ.

ವಿಜಯ್ ಸುಮಾರು ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ನಂತರ ಜಿಮ್‌ಗೆ ಬರುತ್ತಿದ್ದ ಉದ್ಯಮಿಯ ಪುತ್ರಿಯೊಂದಿಗೆ ಆತ ಸನ್ನಿಹಿತನಾಗಿದ್ದನೆಂದು ಹೇಳಲಾಗುತ್ತಿದೆ. ಈ ವಿಚಾರ ತಿಳಿದ ಬಳಿಕ ವಿಜಯ್ ಪತ್ನಿ ಮಕ್ಕಳೊಂದಿಗೆ ತವರು ಮನೆಗೆ ತೆರಳಿದ್ದಳು ಎನ್ನಲಾಗಿದೆ.

ಇನ್ನೊಂದೆಡೆ ವಿಜಯ್ ಮತ್ತು ಯುವತಿ ಕೆಲಕಾಲ ಕಾಣೆಯಾಗಿದ್ದು, ಬಳಿಕ ಪುತ್ರಿಯ ಸಂಬಂಧದ ಬಗ್ಗೆ ತಿಳಿದ ಉದ್ಯಮಿ ಕಾಮಿನೇನಿ ಪ್ರಸಾದ್ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಇಬ್ಬರನ್ನೂ ಪತ್ತೆಹಚ್ಚಿ ಕುಟುಂಬದವರಿಗೆ ಒಪ್ಪಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಈ ಘಟನೆಯ ನಂತರ ವಿಜಯ್‌ಗೆ ಎಚ್ಚರಿಕೆ ನೀಡಲಾಗಿದ್ದು, ಕೆಲವರ ಮೂಲಕ ಹಲ್ಲೆ ಕೂಡ ನಡೆದಿತ್ತು ಎಂಬ ಆರೋಪಗಳೂ ಕೇಳಿಬಂದಿವೆ. ಆದರೂ ವಿಜಯ್ ಮತ್ತು ಯುವತಿ ತಮ್ಮ ಸಂಪರ್ಕ ಮುಂದುವರಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಶ್ರೀರಾಮ್ ತನಿಖೆ ವೇಳೆ ಉದ್ಯಮಿ ಕಾಮಿನೇನಿ ಪ್ರಸಾದ್ ಹಾಗೂ ಇತರ ಕೆಲವರೊಂದಿಗೆ ನಡೆದ ಮಾತುಕತೆಗಳ ಕುರಿತು ಮಾಹಿತಿ ನೀಡಿದ್ದಾನೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪೊಲೀಸರು ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಪ್ರಕರಣದ ಗಂಭೀರತೆಯನ್ನು ಮನಗಂಡು ಕೇಂದ್ರ ವಲಯ ಐಜಿಪಿ ಗಿರೀಶ್ ಬನ್ನೇರುಘಟ್ಟ ಪೊಲೀಸ್ ಠಾಣೆಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲಿಸಿದ್ದಾರೆ. ಪ್ರಕರಣ ಇನ್ನೂ ತನಿಖಾ ಹಂತದಲ್ಲಿದ್ದು, ಬಂಧಿತ ನಾಲ್ವರಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ ಪ್ರಕರಣದಲ್ಲಿ ಉಲ್ಲೇಖವಾಗಿರುವ ಕೆಲ ಪ್ರಮುಖ ಆರೋಪಿಗಳು, ವಕೀಲ ಸೇರಿದಂತೆ, ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ಅವರ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಪ್ರಕರಣದ ಸಂಪೂರ್ಣ ಸತ್ಯ ತನಿಖೆಯ ಬಳಿಕವೇ ಹೊರಬರುವ ಸಾಧ್ಯತೆ ಇದ್ದು, ಯಾವುದೇ ಒತ್ತಡ ಅಥವಾ ಪ್ರಭಾವವಿಲ್ಲದೆ ನಿಷ್ಪಕ್ಷಪಾತ ತನಿಖೆ ನಡೆಸಿ ವಿಜಯ್ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಕುಟುಂಬಸ್ಥರು ಹಾಗೂ ಆಪ್ತರು ಆಗ್ರಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

5 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

20 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago