Categories: Latest

ಸುಜಾತ ಭೂಮಿ ವಿವಾದಕ್ಕೆ ಹೊಸ ತಿರುವು: ರೈತರ ಪರ ನಿಂತ ಹರತಾಳು ಹಾಲಪ್ಪ, ಡಿಎಫ್‌ಒಗೆ ಮನವಿ

ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ರೈತ ಮಹಿಳೆ ಸುಜಾತ ಅವರ ಭೂಮಿ ವಿವಾದ ಇದೀಗ ಹೊಸ ಹಂತ ತಲುಪಿದ್ದು, ಮಾಜಿ ಶಾಸಕ ಹರತಾಳು ಹಾಲಪ್ಪ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ. ಸಾಗರ ಹಾಗೂ ಹೊಸನಗರ ಕ್ಷೇತ್ರದ ಮಾಜಿ ಶಾಸಕ ಹರತಾಳು ಹಾಲಪ್ಪ ಅವರು ಸಾಗರ ತಾಲೂಕಿನ ಸುಜಾತ ಅಡ್ಡೇರಿ ಗ್ರಾಮದ ಸರ್ವೇ ನಂ. 8ರ ಜಾಗವನ್ನು ಪರಿಶೀಲಿಸಿ, ನಂತರ ಸಾಗರ ಅರಣ್ಯ ಇಲಾಖೆ ಕಚೇರಿಗೆ ಭೇಟಿ ನೀಡಿ ಡಿಎಫ್‌ಒ ಅವರೊಂದಿಗೆ ಚರ್ಚೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, “ಉಳುವವನೇ ಭೂಮಿಯ ಒಡೆಯ ಎಂಬ ತತ್ವದಡಿ ಬಡ ರೈತರಿಗೆ ಕನಿಷ್ಠ 10 ಗುಂಟೆ ಜಮೀನು ಉಳಿಸಿಕೊಡಬೇಕು. ಸುಜಾತ ಅವರ ಕುಟುಂಬ ಹಲವು ವರ್ಷಗಳಿಂದ ಈ ಭೂಮಿಯಲ್ಲಿ ಜೀವನ ಸಾಗಿಸುತ್ತಿದ್ದು, ರೈತರ ಬದುಕು ಉಳಿಯುವಂತೆ ಅರಣ್ಯ ಇಲಾಖೆ ಮಾನವೀಯ ದೃಷ್ಟಿಯಿಂದ ನಡೆದುಕೊಳ್ಳಬೇಕು” ಎಂದು ಮನವಿ ಮಾಡಿದರು.

ಈ ಕುರಿತಾಗಿ ಡಿಎಫ್‌ಒ ಅವರೊಂದಿಗೆ ಸಕಾರಾತ್ಮಕ ಚರ್ಚೆ ನಡೆದಿದ್ದು, ರೈತರ ಮನವಿಗೆ ಅವರು ಸ್ಪಂದನೆ ನೀಡಿರುವುದಾಗಿ ಹರತಾಳು ಹಾಲಪ್ಪ ತಿಳಿಸಿದ್ದಾರೆ. “ಸುಜಾತ ಅವರ ಭೂಮಿಯ ವಿಚಾರವನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಅವರು ನಮ್ಮ ಮನವಿಯನ್ನು ಸಹಾನುಭೂತಿಯಿಂದ ಪರಿಗಣಿಸುವ ಭರವಸೆ ನೀಡಿದ್ದಾರೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಮೂರ್ತಿ ಹೊಸಂತೆ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ, ತಾಲೂಕು ಬಿಜೆಪಿ ಅಧ್ಯಕ್ಷ ದೇವೇಂದ್ರಪ್ಪ ಯಲಕುಂದ್ಲಿ, ಗಣೇಶ್ ಪ್ರಸಾದ್, ಅರುಣ್ ಕುಗ್ವೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದೆ ಏನಾಗಿತ್ತು?

ಕೆಲವು ದಿನಗಳ ಹಿಂದೆ ಅಡ್ಡೇರಿ ಗ್ರಾಮದ ಸರ್ವೇ ನಂ. 21ರಲ್ಲಿ ಶರಾವತಿ ಮುಳುಗಡೆ ಸಂತ್ರಸ್ತೆ ಸುಜಾತ ಅವರ ಜಮೀನಿನಲ್ಲಿ ಬೆಳೆದಿದ್ದ ಅಡಿಕೆ, ಕಬ್ಬು, ಮಾವು ಹಾಗೂ ಇತರ ಬೆಳೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದ್ದರಿಂದ ಭಾರೀ ವಿವಾದ ಉಂಟಾಗಿತ್ತು. ಈ ಕ್ರಮವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯ ರೈತರು ಸಾಗರ ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಯಲ್ಲಿ ಮಾತನಾಡಿದ್ದ ಮುಖಂಡರು, ಹಲವು ದಶಕಗಳಿಂದ ರೈತರು ಸಾಗುವಳಿ ಮಾಡಿಕೊಂಡು ಬದುಕು ಸಾಗಿಸುತ್ತಿರುವ ಜಾಗದಲ್ಲಿ ಏಕಾಏಕಿ ದೌರ್ಜನ್ಯ ನಡೆಸಿರುವುದು ಸರಿಯಲ್ಲ ಎಂದು ಆರೋಪಿಸಿದ್ದರು. ಬಗರ್‌ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿ ಸರ್ವೇ ಕಾರ್ಯ ನಡೆಯುತ್ತಿರುವ ನಡುವೆಯೇ ಬೆಳೆ ನಾಶಪಡಿಸಿರುವುದನ್ನು ತೀವ್ರವಾಗಿ ಖಂಡಿಸಿದ್ದರು.

ರೈತರ ಹಿತರಕ್ಷಣೆಯಲ್ಲಿ ಶಾಸಕ ಹಾಗೂ ಅರಣ್ಯ ಕಯಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ವಿಫಲರಾಗಿದ್ದಾರೆ ಎಂದು ಆರೋಪಿಸಿ, ಅವರ ರಾಜೀನಾಮೆಗೆ ಆಗ್ರಹವೂ ಕೇಳಿಬಂದಿತ್ತು. ಘಟನೆಯ ಬಳಿಕ ಅರಣ್ಯ ಇಲಾಖೆ ತನಿಖೆಗೆ ತಂಡ ರಚಿಸಿರುವುದಾಗಿ ತಿಳಿಸಿತ್ತು.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago