Categories: CrimeLatest

ಬಳ್ಳಾರಿ ಪಾಲಿಕೆ ಹಲ್ಲೆ ಪ್ರಕರಣಕ್ಕೆ ಹೊಸ ತಿರುವು; ಇಂಜಿನಿಯರ್ ವಿರುದ್ಧ ಅಟ್ರಾಸಿಟಿ ಕೇಸ್..!

ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ನಡೆದ ಹಲ್ಲೆ ಪ್ರಕರಣ ಇದೀಗ ಹೊಸ ತಿರುವು ಪಡೆದಿದೆ. ಕಾಂಗ್ರೆಸ್ ಸದಸ್ಯ ಕುಬೇರ್ ದಾಳಿ ನಡೆಸಿದ ಆರೋಪ ಎದುರಿಸುತ್ತಿರುವ ಪಾಲಿಕೆ ಇಂಜಿನಿಯರ್ ವೀರೇಶ್ ವಿರುದ್ಧವೇ ಅಟ್ರಾಸಿಟಿ ಪ್ರಕರಣ ದಾಖಲಾಗಿರುವುದು ಚರ್ಚೆಗೆ ಕಾರಣವಾಗಿದೆ.

ಮಾಹಿತಿಯ ಪ್ರಕಾರ, ಮಹಾನಗರ ಪಾಲಿಕೆ ಇಂಜಿನಿಯರ್ ವೀರೇಶ್ ಮೇಲೆ ಕಾಂಗ್ರೆಸ್ ಸದಸ್ಯ ಕುಬೇರ್ ಹಲ್ಲೆ ನಡೆಸಿದ್ದರು. ಈ ಸಂಬಂಧ ವೀರೇಶ್ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜೀವ ಬೆದರಿಕೆ ಹಾಗೂ ಹಲ್ಲೆ ಪ್ರಕರಣದಡಿ ಕುಬೇರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆದರೆ, ಪ್ರಕರಣ ಇದಲ್ಲೇ ನಿಂತಿಲ್ಲ. ಮಹಾನಗರ ಪಾಲಿಕೆ ಮೇಯರ್ ಗಾದೆಪ್ಪ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ರಾಯಲ್ ವೃತ್ತದಿಂದ ಬ್ರೂಸ್ ಪೇಟೆ ಠಾಣೆಯವರೆಗೆ ಪಾದಯಾತ್ರೆ ನಡೆಸಿ, ವೀರೇಶ್ ವಿರುದ್ಧವೇ ದೂರು ನೀಡಿದ್ದಾರೆ.

ಈ ವೇಳೆ ಕಾಂಗ್ರೆಸ್ ಮುಖಂಡರು ಮಾತನಾಡಿ, “ನಮ್ಮ ಕಾರ್ಯಕರ್ತನಿಗೆ ಇಂಜಿನಿಯರ್ ವೀರೇಶ್ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಆದ್ದರಿಂದ ಅವರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇದರಿಂದ, ಹಲ್ಲೆ ಪ್ರಕರಣಕ್ಕೆ ರಾಜಕೀಯ ಬಣ್ಣ ತಗುಲಿದ್ದು, ಎರಡೂ ಪಾಳಯಗಳಿಂದ ಪರಸ್ಪರ ದೂರು-ಪ್ರತಿದೂರುಗಳು ದಾಖಲಾಗಿವೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪ್ರಿಪೇಯ್ಡ್ ಮೊಬೈಲ್ ಬಳಕೆದಾರರಿಗೆ ಗುಡ್‌ನ್ಯೂಸ್: ಇನ್ಮುಂದೆ 30 ದಿನಗಳ ರೀಚಾರ್ಜ್, ವರ್ಷಕ್ಕೆ 12 ಬಾರಿ ಸಾಕು!

ನವದೆಹಲಿ: ಪ್ರಿಪೇಯ್ಡ್ ಮೊಬೈಲ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ಜಾರಿಗೆ ತಂದಿದೆ. ಟೆಲಿಕಾಂ ಕನ್ಸ್ಯೂಮರ್ ಪ್ರೊಟೆಕ್ಷನ್ (ಥರ್ಟೀನ್ತ್ ಅಮೆಂಡ್‌ಮೆಂಟ್)…

4 hours ago

ರೈಲ್ವೇ ನಿಲ್ದಾಣದಲ್ಲಿ ಪತಿಯ ಕಣ್ಣೆದುರೇ ಪ್ರಿಯಕರನನ್ನು ತಬ್ಬಿದ ಇಬ್ಬರು ಮಕ್ಕಳ ತಾಯಿ! 20 ವರ್ಷದ ಯುವಕನ ಜೊತೆ ಹೋಗುತ್ತೇನೆಂದು ಹಠ.

ವಾರಣಾಸಿ (ಉತ್ತರ ಪ್ರದೇಶ): ಇಬ್ಬರು ಮಕ್ಕಳ ತಾಯಿಯೊಬ್ಬಳು ತನ್ನ 20 ವರ್ಷದ ಪ್ರಿಯಕರನೊಂದಿಗೆ ಹೋಗುವುದಾಗಿ ಪತಿಯ ಎದುರೇ ಹಠ ಹಿಡಿದು,…

20 hours ago

ಸಿವಿಲ್‌ ವ್ಯಾಜ್ಯದಲ್ಲಿ ಪೊಲೀಸ್‌ ಹಸ್ತಕ್ಷೇಪ: ಮಂಗಳೂರು ತನಿಖಾಧಿಕಾರಿಗೆ ಹೈಕೋರ್ಟ್‌ ತೀವ್ರ ಚಾಟಿ

ಮಂಗಳೂರು: ಸಿವಿಲ್‌ ವ್ಯಾಜ್ಯಗಳಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಬಾರದು ಎಂದು ನ್ಯಾಯಾಲಯಗಳು ಹಲವು ಬಾರಿ ಸ್ಪಷ್ಟಪಡಿಸಿದ್ದರೂ, ಇಂತಹ ಪ್ರಕರಣಗಳು ಮುಂದುವರಿಯುತ್ತಿವೆ. ಇದೀಗ…

20 hours ago

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…

1 day ago

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…

1 day ago

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

2 days ago