Categories: CrimeLatest

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು: ಎರಡನೇ ಬಾರಿ ಗರ್ಭಿಣಿ, ಪೋಷಕರ ವಿರುದ್ಧವೂ ಪ್ರಕರಣ

ಹುಬ್ಬಳ್ಳಿ: ನಗರದ ಉಣಕಲ್ ಪ್ರದೇಶದಲ್ಲಿ 15 ವರ್ಷ 6 ತಿಂಗಳ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಈಗಾಗಲೇ ಒಮ್ಮೆ ಮಗುವಿಗೆ ಜನ್ಮ ನೀಡಿದ್ದ ಬಾಲಕಿ ಇದೀಗ ಎರಡನೇ ಬಾರಿಗೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಭ್ಯ ಮಾಹಿತಿಯ ಪ್ರಕಾರ, ಆರೋಪಿಯು ಬಾಲಕಿಯನ್ನು ಪುಸಲಾಯಿಸಿ ಉಣಕಲ್ ರೈಲ್ವೆ ಸೇತುವೆ ಸಮೀಪಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಕೆಲವೇ ವಾರಗಳ ಹಿಂದೆ ಬಾಲಕಿ ಮಗುವಿಗೆ ಜನ್ಮ ನೀಡಿದ್ದು, ಆ ಮಗುವನ್ನು ಪೋಷಕರು ಮಾರಾಟ ಮಾಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಈ ಆರೋಪದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಾಲಕಿ ಮತ್ತೆ ಗರ್ಭಿಣಿಯಾಗಿರುವ ಸಂಗತಿ ಬೆಳಕಿಗೆ ಬಂದಿದ್ದು, ಈ ವಿಷಯ ತಿಳಿದಿದ್ದರೂ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡದೆ ಪ್ರಕರಣವನ್ನು ಮುಚ್ಚಿಟ್ಟಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಾಲಕಿಯ ತಂದೆ-ತಾಯಿ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ, ಬಾಲಕಿಯ ಸುರಕ್ಷತೆಯಲ್ಲಿ ನಿರ್ಲಕ್ಷ್ಯ ಹಾಗೂ ನವಜಾತ ಶಿಶುವಿನ ಅಕ್ರಮ ಮಾರಾಟದ ಶಂಕೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣಗೊಂಡ ನಂತರ ಇನ್ನಷ್ಟು ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆ ಇದೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

2 days ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

2 days ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

2 days ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

3 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

3 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

3 days ago