ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು ತಿಂಗಳಲ್ಲೇ ಯುವತಿ ಸಾವನ್ನಪ್ಪಿರುವ ಘಟನೆ ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಕೌಶಲ್ಯ (23) ಮೃತ ಯುವತಿ. ಅವರು ಪತಿ ಶಿವಕುಮಾರ್ ನಾಯ್ಕ್ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆದರೆ ಇದು ಆತ್ಮಹತ್ಯೆಯಲ್ಲ, ಪತಿ ಹಾಗೂ ಅವರ ಕುಟುಂಬಸ್ಥರು ಸೇರಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಮೃತೆಯ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.
ಮದುವೆ ಸಂದರ್ಭದಲ್ಲಿ 18 ತೊಲೆ ಬಂಗಾರ ಹಾಗೂ 3 ಲಕ್ಷ ರೂಪಾಯಿ ನಗದು ನೀಡಲಾಗಿತ್ತು. ಹರಪನಹಳ್ಳಿಯ ಕಲ್ಯಾಣ ಮಂಟಪದಲ್ಲಿ ಅದ್ದೂರಿಯಾಗಿ ಮದುವೆ ನೆರವೇರಿಸಿದ್ದರೂ, ಬಳಿಕ ಮತ್ತಷ್ಟು ವರದಕ್ಷಿಣೆಗಾಗಿ ಒತ್ತಡ ಹಾಕಲಾಗುತ್ತಿತ್ತು ಎಂದು ಕುಟುಂಬಸ್ಥರು ದೂರಿದ್ದಾರೆ.
ಇದಲ್ಲದೆ, ಶೀಲ ಶಂಕೆ ನೆಪದಲ್ಲಿ ಕೌಶಲ್ಯ ಅವರಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು ಎನ್ನಲಾಗಿದೆ. ಕಳೆದ ಮೂರು ತಿಂಗಳಿನಿಂದ ತವರಿಗೆ ಕಳುಹಿಸಿರಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
ಮೃತೆಯ ಪತಿ ಶಿವಕುಮಾರ್ ನಾಯ್ಕ್ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿನ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ. ಕುಟುಂಬಸ್ಥರು ಆರೋಪಿಸಿರುವ ಕೊಲೆ ಹಾಗೂ ವರದಕ್ಷಿಣೆ ಕಿರುಕುಳದ ಬಗ್ಗೆ ತನಿಖೆಯ ಬಳಿಕ ಸ್ಪಷ್ಟ ಚಿತ್ರಣ ದೊರೆಯಲಿದೆ.
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…