ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ದೇವರಾಜ ಅರಸು ಜನ್ಮ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇವರಾಜ ಅರಸು ಅವರು ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸಬೇಕು ಎಂದು ತಂದಿದ್ದ ಕಾಯ್ದೆಗೆ ಬಿಜೆಪಿಯವರು ತಿದ್ದುಪಡಿ ತಂದು ನೇಗಿಲು ಹಿಡಿಯಲು ಬಾರದವರಿಗೂ ಕೃಷಿ ಭೂಮಿ ಖರೀದಿಗೆ ಅವಕಾಶ ಕಲ್ಪಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದ ಕೂಡಲೇ ಈ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಿ ಹಿಂದಿನಂತೆ ಕೃಷಿಕರಷ್ಟೇ ಕೃಷಿ ಭೂಮಿ ಕರಿದಿಸುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲೀಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…