Categories: CrimeLatest

3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಅರೆಸ್ಟ್!

ಹಳಿಯಾಳ: ಸುಲಿಗೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಮೂರು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ನ್ನು ಹಳಿಯಾಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಹಳಿಯಾಳ ತಾಲೂಕಿನ ತತ್ವಣಗಿ ಹೊಸೂರು ಗ್ರಾಮದ ಕೃಷ್ಣಾ ಮಾರುತಿ ಹುಲಸ್ವಾರ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿದ್ದು, ರೌಡಿಶೀಟರ್ ಪಟ್ಟಿಯಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

2021ರ ಮಾರ್ಚ್ 27ರಂದು ತತ್ವಣಗಿ ಗ್ರಾಮದ ಹೊಸೂರು ಪ್ರದೇಶದಲ್ಲಿ ಸಿಮೆಂಟ್ ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ, ಅಲ್ಲಿ ಕೆಲಸ ಮಾಡುತ್ತಿದ್ದ ರಾಜು ಶಿವಾಜಿ ಡಾಂಗೆ ಎಂಬುವವರ ಬಳಿ ತೆರಳಿದ ಆರೋಪಿ, “ರಸ್ತೆ ಕೆಲಸ ಮಾಡುತ್ತಿದ್ದೀರಾ, ನಮಗೂ ಹಣ ಕೊಡಬೇಕು” ಎಂದು ಹಣಕ್ಕೆ ಒತ್ತಾಯಿಸಿದ್ದಾನೆ ಎನ್ನಲಾಗಿದೆ. ಹಣ ನೀಡಲು ನಿರಾಕರಿಸಿದ ಹಿನ್ನೆಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಲ್ಲದೆ, ಮೊಬೈಲ್ ಕಸಿದುಕೊಂಡು ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಆದರೆ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದರಿಂದ ಜೆಎಂಎಫ್‌ಸಿ ನ್ಯಾಯಾಲಯವು ದಸ್ತಗಿರಿ ವಾರಂಟ್ ಜಾರಿಗೊಳಿಸಿತ್ತು.

ಆರೋಪಿಯ ಬಂಧನಕ್ಕಾಗಿ ವಿಶೇಷ ತಂಡ ರಚಿಸಿದ್ದ ಹಳಿಯಾಳ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಮಹಾರಾಷ್ಟ್ರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದರು. ಸತತ ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೇ 22ರಂದು ತತ್ವಣಗಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ಅಡಗಿದ್ದ ಆರೋಪಿಯನ್ನು ಬಂಧಿಸಲಾಯಿತು.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್ (ಐಪಿಎಸ್), ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೃಷ್ಣಮೂರ್ತಿ ಹಾಗೂ ಜಗದೀಶ ನಾಯ್ಕ, ದಾಂಡೇಲಿ ಡಿವೈಎಸ್ಪಿ ಶಿವಾನಂದ ಮದರಕಂಡಿ ಮತ್ತು ಹಳಿಯಾಳ ಸಿಪಿಐ ಜಯಪಾಲ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.

ಪಿಎಸ್‌ಐ ಬಸವರಾಜ ಮಬನೂರ ಹಾಗೂ ಕೃಷ್ಣಾ ಅರಕೇರಿ ನೇತೃತ್ವದ ತಂಡದಲ್ಲಿ ಎಎಸ್‌ಐ ವೆಂಕಟೇಶ ತೆಗ್ಗಿನ, ಮಹಮದ್ ಹನೀಫ್, ಅರವಿಂದ ಭಜಂತ್ರಿ, ಯೋಗೇಶ್ ಗೌಡ, ಶ್ರೀಶೈಲ್ ಜಿ.ಎಂ., ವಿನೋದ್ ಜಿ.ಬಿ., ರಾಘವೇಂದ್ರ ಹಾಗೂ ಶಬಾನಾ ಪಾಟೀಲ್ ಅವರು ಭಾಗವಹಿಸಿದ್ದರು.

ಯಶಸ್ವಿ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪೊಲೀಸ್ ತಂಡವನ್ನು ಶ್ಲಾಘಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

2 days ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

2 days ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

6 days ago