Latest

ದೇವಾಲಯ ಪಕ್ಕದ ಉದ್ಯಾನವನದಲ್ಲಿ ಅಶ್ಲೀಲ ಕೃತ್ಯ – ಸಾರ್ವಜನಿಕ ಆಕ್ರೋಶ

ರಾಯಚೂರು, ಜು.25 – ಲಿಂಗಸುಗೂರು ತಾಲೂಕಿನ ದೇವರಭೂಪುರ ಗ್ರಾಮದ ಪ್ರಸಿದ್ಧ ಅಮರೇಶ್ವರ ದೇವಾಲಯದ ಪಕ್ಕದಲ್ಲಿರುವ ಉದ್ಯಾನವನದಲ್ಲಿ ಅಶ್ಲೀಲ ಚಟುವಟಿಕೆಗಳು ನಡೆಯುತ್ತಿದ್ದ ಆರೋಪಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ.

ಭಕ್ತರು ಹಾಗೂ ಪ್ರವಾಸಿಗರಿಗಾಗಿ ಸರ್ಕಾರಿ ಹಣದಿಂದ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿತ ಈ ಉದ್ಯಾನವನ, ಈಗ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಉದ್ಯಾನವನವನ್ನು ಸಾರ್ವಜನಿಕರಿಗೆ ವಿಶ್ರಾಂತಿ ಸ್ಥಳವಾಗಿ ಬಳಸಲು ರೂಪಿಸಲಾಗಿತ್ತು. ಆದರೆ, ನಿರ್ವಹಣಾ ಕೊರತೆಯಿಂದ ಜಾಗ ಹಾಳಾಗಿ, ಅಪಪ್ರಯೋಗಕ್ಕೆ ಒಳಗಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ನಿರಂತರವಾಗಿ ವೇಶ್ಯಾವಾಟಿಕೆ ಮತ್ತು ಅಶ್ಲೀಲ ಕೃತ್ಯಗಳು ನಡೆಯುತ್ತಿದ್ದು, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಲಾಗಿದೆ.

ಹೊಂದಿಸಿದ ಮಾಹಿತಿಯಂತೆ, ಉದ್ಯಾನವನ ಪ್ರವೇಶಕ್ಕೆ ನಿಗದಿಪಡಿಸಿರುವ 10 ರೂ. ಪ್ರವೇಶ ದರದ ಬದಲಿಗೆ, ಹೊರಗುತ್ತಿಗೆ ನೌಕರರು ಹೆಚ್ಚು ಹಣ ಪಡೆದು ಅನೈತಿಕ ಚಟುವಟಿಗಳಿಗೆ ಅವಕಾಶ ನೀಡುತ್ತಿದ್ದಾರೆ ಎನ್ನಲಾಗಿದೆ.

ಭಕ್ತರ ಭಾವನೆಗೆ ಧಕ್ಕೆ ತರುವ ಈ ಘಟನೆಗಳಿಗೆ ತಕ್ಷಣ ಕಡಿವಾಣ ಹಾಕಬೇಕೆಂದು ಸಂಘಟನೆಯವರು ಒತ್ತಾಯಿಸಿದ್ದು, ಪಾರ್ಕ್‌ನಲ್ಲಿ ಸುಸಜ್ಜಿತ ಭದ್ರತಾ ವ್ಯವಸ್ಥೆ ಹಾಗೂ ನಿಗಾ ಸಾಧನೆಯ ಸ್ಥಾಪನೆಯ ಅವಶ್ಯಕತೆಯಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 

nazeer ahamad

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

12 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

16 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago