ರಾಮನಗರ: ಕುದುರು ಪೊಲೀಸ್ ಠಾಣಾ ವ್ಯಾಪ್ತಿಯ ಸೋಲೂರು ಗ್ರಾಮದ ಸರ್ವಿಸ್ ರಸ್ತೆಯಲ್ಲಿ, ದಿನಾಂಕ 21.03.2025ರಂದು ರಾತ್ರಿ ಇಬ್ಬರು ವ್ಯಕ್ತಿಗಳು ಜಗಳವಾಡುತ್ತಿದ್ದರು. ಈ ವೇಳೆ, ಹೆದ್ದಾರಿ ಗಸ್ತು ವಾಹನಕ್ಕೆ ನಿಯೋಜಿತ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಜಗಳ ನಿಯಂತ್ರಿಸಲು ಮುಂದಾದಾಗ, ಅವರಲ್ಲಿ ಒಬ್ಬನು ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ ಮಾತ್ರವಲ್ಲದೆ, ಅವರನ್ನು ಎಳೆದಾಡಿ, ಸರ್ಕಾರಿ ಕಾರ್ಯದಲ್ಲಿ ಅಡ್ಡಿಪಡಿಸಿದ್ದಾನೆ.
ಈ ಕುರಿತು ಪೊಲೀಸ್ ಸಿಬ್ಬಂದಿ ನೀಡಿದ ದೂರಿನ ಮೇರೆಗೆ, ಕುದುರು ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ (ಮೋ.ಸಂ: 91/2025) ದಾಖಲಿಸಲಾಗಿದೆ. ಪ್ರಕರಣವನ್ನು ಭಾರತೀಯ ದಂಡ ಸಂಹಿತೆಯ ಕಲಂ 132, 35(2), 352 ಅಡಿಯಲ್ಲಿ ದಾಖಲಿಸಿಕೊಂಡು, ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ದಿನಾಂಕ 23.03.2025 ರಂದು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…