ಕಲಬುರಗಿ-ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರಿಗಳನ್ನೊಳಗೊಂಡ ತಂಡ ಗುರುವಾರ ಮತ್ತು ಶುಕ್ರವಾರ ಕಲಬುರಗಿ ನಗರದ ವಿವಿಧ ಪ್ಲಾಸ್ಟಿಕ್ ಅಂಗಡಿಗಳ ಮೇಲೆ ದಾಳಿ ಮಾಡಿ 1.6 ಟನ್ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದಲ್ಲದೆ ಅಂಗಡಿ ಮಾಲೀಕರಿಗೆ 27 ಸಾವಿರ ರೂ. ದಂಡ ಸಹ ವಿಧಿಸಿದ್ದಾರೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಬೆಂಗಳೂರಿನ ಅಪರ ನಿರ್ದೇಶಕಿ ಪಿ.ಕೆ.ಸೆಲ್ವಿ ನೇತೃತ್ವದ ಅಧಿಕಾರಿಗಳ ತಂಡವು ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿರುವ ರಾಮದೇವ ಟ್ರೇಡರ್ಸ್, ವಿಕಾಸ ಟ್ರೇಡರ್ಸ್ , ಮಹಾದೇವಿ ಟ್ರೇಡರ್ಸ್ ಹಾಗೂ ಬಸ್ ಸ್ಟ್ಯಾಂಡ್ ಹತ್ತಿರದ ಬನಶಂಕರಿ ಟ್ರೇಡರ್ಸ್ ಹಾಗೂ ಸ್ವಾಮಿ ಅಂಗಡಿ ಮೇಲೆ ದಾಳಿ ನಡೆಸಿ ಸುಮಾರು 1.6 ಟನ್ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ. ಸ್ಥಳದಲ್ಲಿಯೇ ರಸೀದಿ ನೀಡಿ ದಂಡ ಪಡೆದಿದಲ್ಲದೆ ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಣೆ, ಮಾರಾಟ, ಬಳಕೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ಆದಮ್ ಸಾಬ್ ಪಟೇಲ್, ಸುಧಾರಾಣಿ, ಶಾರದಾ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಕೆ. ಎಸ್.ಪಾಟೀಲ್, ಸಿದ್ದಲಿಂಗ, ದೀಪಕ್ ಚೌಹಾಣ್ ಹಾಗೂ ಧನರಾಜ್ ಇದ್ದರು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…