Latest

ರಸ್ತೆ ನಿರ್ಮಾಣ ವಿರೋಧದ ನಡುವೆ ಗುಂಡು ದಾಳಿ, ಓರ್ವನಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ, ಏಪ್ರಿಲ್ 23: ರಸ್ತೆ ನಿರ್ಮಾಣ ವಿರೋಧಿಸಿ ನಡೆಯುತ್ತಿದ್ದ ಶಾಂತಿಯಾದ ಪ್ರತಿಭಟನೆ ಹಿಂಸಾತ್ಮಕ ತಿರುವು ಪಡೆದುಕೊಂಡ ಘಟನೆ ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ನಡೆದಿದೆ. ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಅವರ ಸಂಬಂಧಿ ಸಕಲೇಶಕುಮಾರ್, ಪ್ರತಿಭಟನಾಕಾರರ ಮೇಲೆ ಬೆದರಿಕೆ ಗೊಳಿಸಲು ಗುಂಡು ಹಾರಿಸಿದ್ದು, ಈ ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಂಭೀರವಾಗಿ ಗಾಯವಾಗಿದೆ.

ಸ್ಥಳೀಯರು ಕಲ್ಲು ಕ್ವಾರಿ ಕ್ರಷರ್‌ಗೆ ರಸ್ತೆ ನಿರ್ಮಾಣವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅಹಿತಕರವಾಗಿ ಸ್ಥಳಕ್ಕೆ ಧಾಜಿಸಿದ ಸಕಲೇಶಕುಮಾರ್, ಸಿನಿಮಾ ಶೈಲಿಯಲ್ಲಿ ಜನರ ಮಧ್ಯೆ ನುಗ್ಗಿ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಚಿಕನ್ ರವಿ ಎಂಬ ವ್ಯಕ್ತಿಗೆ ಒಂದು ಗುಂಡು ತಗುಲಿದ್ದು, ಅವರನ್ನು ತಕ್ಷಣ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ಬಳಿಕ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಮತ್ತು ಹಿರಿಯ ಅಧಿಕಾರಿಯಾದ ದೀಪ್ತಿ ಎನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಕಲೇಶಕುಮಾರ್ನನ್ನು ಮಂಚೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ಮುಂದಿನ ತನಿಖೆ ಪ್ರಗತಿಯಲ್ಲಿದೆ.

ಇದೇ ಸಂದರ್ಭದಲ್ಲಿ, ಆರೋಪಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಚೇನಹಳ್ಳಿ ಠಾಣೆಯ ಮುಂದೆ ಸ್ಥಳೀಯರು ಮತ್ತೊಂದು ಪ್ರತಿಭಟನೆ ನಡೆಸಿದ್ದಾರೆ. ಘಟನೆಯು ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿಯನ್ನುಂಟುಮಾಡಿದ್ದು, ಸಾರ್ವಜನಿಕ ಭದ್ರತೆಗೆ ಹೆಚ್ಚಿನ ಪೊಲೀಸ್ ಬಲ ನಿಯೋಜಿಸಲಾಗಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

17 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago