ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಕುಪಕಡ್ಡಿ ಕ್ರಾಸ್ ಬಳಿಯಲ್ಲಿ ಈರುಳ್ಳಿ ಬೆಳೆಗಾರರು ರಸ್ತೆ ಮೇಲೆ ಈರುಳ್ಳಿ ಸುರಿದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಕೂಡ ಕ್ವಿಂಟಾಲಿಗೆ ಕೇವಲ ₹200ಕ್ಕೆ ಹರಾಜಾಗುತ್ತಿರುವುದನ್ನು ವಿರೋಧಿಸಿ ಅವರು ಈ ರೀತಿಯ ಕ್ರಮ ಕೈಗೊಂಡಿದ್ದಾರೆ.
ತೋಟಗಾರಿಕೆ ಎಫ್‌ಪಿಒ ಆವರಣದಲ್ಲಿಯೂ ರೈತರು ಈರುಳ್ಳಿ ಸುರಿದು ಪ್ರತಿಭಟನೆ ನಡೆಸಿದ್ದು, ದುಡಿದು ಬೆಳೆದ ಬೆಳೆಗೆ ನ್ಯಾಯ ಸಿಗದಿರುವುದರ ಬಗ್ಗೆ ಗಂಭೀರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮೇಲೂ ರೈತರು ತಮ್ಮ ಪ್ರತಿಭಟನೆ ಮುಂದುವರೆಸಿದ ದೃಶ್ಯಗಳು ಗಮನಸೆಳೆದಿವೆ.
“ಬಾಗಲಕೋಟೆಯಲ್ಲಿ ಈರುಳ್ಳಿ ಕ್ವಿಂಟಾಲಿಗೆ ₹1000ಕ್ಕೆ ಮಾರಾಟವಾಗುತ್ತಿದೆ. ಆದರೆ ಇಲ್ಲಿ ₹200ಗೂ ಹೆಚ್ಚು ಸಿಗುತ್ತಿಲ್ಲ. ನಾವು ಇಷ್ಟೊಂದು ಶ್ರಮವಹಿಸಿ ಬೆಳೆದ ಬೆಳೆಗೆ ಈ ರೀತಿ ನಿರ್ಲಕ್ಷ್ಯವಾಯಿತೆ?” ಎಂದು ಅಸಹನೆಗೊಂಡ ರೈತರು ಬೇಸರ ವ್ಯಕ್ತಪಡಿಸಿದರು.
ಈ ಬೆಳೆಗೆ ಖಾಯಂ ದರ ನಿರ್ಧರಿಸಿ, ರೈತರ ಆರ್ಥಿಕ ನಷ್ಟ ತಪ್ಪಿಸಲು ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು ಎಂಬುದು ರೈತರ ಮುಖ್ಯ ಬೇಡಿಕೆ. ಬೆಲೆ ಕುಸಿತದ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕು ಎಂದು ರೈತ ಸಮುದಾಯ ಒತ್ತಾಯಿಸುತ್ತಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…