Latest

ಆನ್‌ಲೈನ್ ರಿವ್ಯೂ ಪ್ರಕರಣ: ಯುವಕನಿಗೆ ₹5.5 ಲಕ್ಷ ಮೋಸ!

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬೆಳಗುಲಿ ಗ್ರಾಮಕ್ಕೆ ಸೇರಿದ ವ್ಯಾಆರ್ ಧನಂಜಯ ಆನ್‌ಲೈನ್ ಲಾಭದ ಆಸೆಗೆ ₹5 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಧನಂಜಯಗೆ ವಾಟ್ಸಪ್ ಮೂಲಕ ಪರಿಚಯವಾದ ಸೈಬರ್ ಮೋಸಗಾರರು, ವೆಬ್‌ಸೈಟ್‌ಗಳಲ್ಲಿ ಮಾರಾಟವಾಗುವ ಉತ್ಪನ್ನಗಳಿಗೆ ರಿವ್ಯೂ ನೀಡಿ ಕಮಿಷನ್‌ ಸಂಪಾದಿಸಬಹುದು ಎಂದು ಭರವಸೆ ನೀಡಿದ್ದರು. ಪ್ರಾರಂಭದಲ್ಲಿ ಒಂದು ಉತ್ಪನ್ನಕ್ಕೆ ರಿವ್ಯೂ ನೀಡಿದ ನಂತರ ಅವರ ಖಾತೆಗೆ ₹839 ಜಮೆಯಾಗಿದ್ದು, ಇದು ಅವರ ನಂಬಿಕೆಯನ್ನು ಗೆದ್ದಿತು.

ಮುಂದೆ, ಹೆಚ್ಚಿನ ಲಾಭಾಂಶ ದೊರೆಯುತ್ತದೆ ಎಂಬ ವಾಗ್ದಾನದೊಂದಿಗೆ ಟೆಲಿಗ್ರಾಮ್‌ ಅ್ಯಪ್‌ ಮೂಲಕ ಸಂಪರ್ಕ ಸಾಧಿಸಿ ₹10 ಸಾವಿರ ಹೂಡಿಕೆ ಮಾಡುವಂತೆ ಕೇಳಲಾಗಿದೆ. ಇದರ ನಂತರ ಅವರ ಖಾತೆಗೆ ₹15,343 ಜಮೆಯಾಗಿತ್ತು. ಇದರಿಂದ ಮತ್ತಷ್ಟು ನಂಬಿಕೆ ಬಂದ ಧನಂಜಯ, ಹಂತ ಹಂತವಾಗಿ ಒಟ್ಟು ₹5,59,951 ಮೊತ್ತವನ್ನು ವರ್ಗಾಯಿಸಿದರು.

ಆದರೆ, ಈ ಎಲ್ಲಾ ಹೂಡಿಕೆಗಳ ವಿರುದ್ಧ ಅವರಿಗೆ ಕೇವಲ ₹55,182 ಮಾತ್ರ ವಾಪಸ್‌ ಬಂದಿದೆ. ಉಳಿದ ಮೊತ್ತ ವಾಪಸ್ ಪಡೆಯಲು ಮತ್ತಷ್ಟು ಹಣ ಪಾವತಿಸುವಂತೆ ನಿರಂತರ ಒತ್ತಡ ಬಂದಿದ್ದು, ಅನುಮಾನಗೊಂಡ ಧನಂಜಯ ಕೊನೆಗೆ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆಯ ಕುರಿತು ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಸಾರ್ವಜನಿಕರು ಈ ರೀತಿಯ ಆನ್ಲೈನ್ ಆಮಿಷಗಳಿಂದ ಎಚ್ಚರಿಕೆ ವಹಿಸಲು ಅಧಿಕಾರಿಗಳು ಎಚ್ಚರಿಸಿದ್ದಾರೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

3 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

3 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

4 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

4 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

4 hours ago