ಬೆಂಗಳೂರು ನಗರದಲ್ಲಿ ಪಿಜಿ ಮುಂದೆ ಮದ್ಯಪಾನ ಮಾಡುತ್ತಿದ್ದವರನ್ನು ಪ್ರಶ್ನಿಸಿದ್ದ ಕಾರಣಕ್ಕೆ ಪಿಜಿ ಮಾಲೀಕನೊಬ್ಬ ಹತ್ಯೆಯಾಗಿರುವ ದುರ್ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಸ್ತೂರಿಬಾ ನಗರದಲ್ಲಿ ಪಿಜಿ ನಡೆಸುತ್ತಿದ್ದ ಮಾಧವ್ ಮೆಟ್ಲಿ (40) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಪಿಜಿ ಮುಂದೆ ಇಬ್ಬರು ವ್ಯಕ್ತಿಗಳು ಮದ್ಯಪಾನ ಮಾಡುತ್ತಾ ಜೋರಾಗಿ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ಮಾಧವ್, ಅಲ್ಲಿಂದ ತೆರಳುವಂತೆ ಹೇಳಿ ಪ್ರಶ್ನಿಸಿದ್ದರು ಎನ್ನಲಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿ ಎರಡೂ ಪಕ್ಷಗಳ ನಡುವೆ ವಾಗ್ವಾದ ಉಂಟಾಗಿದೆ. ಈ ವೇಳೆ ಕೈಯಲ್ಲಿ ಬ್ಯಾಟ್ ಹಿಡಿದುಕೊಂಡು ಬಂದಿದ್ದ ಮಾಧವ್ ಹಾಗೂ ಆರೋಪಿಗಳ ನಡುವೆ ಗಲಾಟೆ ತೀವ್ರಗೊಂಡಿದೆ.
ಬಳಿಕ ಆರೋಪಿಗಳು ಬ್ಯಾಟ್ ಕಸಿದುಕೊಂಡು ಮಾಧವ್ ಮೇಲೆಯೇ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಮಾಧವ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…