Categories: CrimeLatest

ಮದುವೆಗೆ ವಿರೋಧ: ಚಾಮರಾಜನಗರದಲ್ಲಿ ಪ್ರೇಮಿಗಳ ದಾರುಣ ಅಂತ್ಯ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದೆ. ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದು ಪ್ರೇಮಿಗಳಿಬ್ಬರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಾದಿಯಾ (19) ಮತ್ತು ನಾಗೇಂದ್ರ (21) ಮೃತ ಪ್ರೇಮಿಗಳಾಗಿದ್ದಾರೆ. ಪಾಲಾರ್ ಗ್ರಾಮದ ನಾದಿಯಾಳನ್ನು ನಾಗೇಂದ್ರ ಪ್ರೀತಿಸುತ್ತಿದ್ದು, ಇವರಿಬ್ಬರ ಸಂಬಂಧಕ್ಕೆ ಮನೆಯವರು ಒಪ್ಪಿಗೆ ನೀಡಿರಲಿಲ್ಲ ಎಂದು ತಿಳಿದುಬಂದಿದೆ.

ಮೂರು ದಿನಗಳ ಹಿಂದೆ ನಾದಿಯಾ, ನಾಗೇಂದ್ರ ಜೊತೆಗೆ ಪೊನ್ನಾಚಿ ಗ್ರಾಮಕ್ಕೆ ತೆರಳಿದ್ದಳು. ಅಲ್ಲಿರುವ ತನ್ನ ತಾತನ ಮನೆಯಲ್ಲಿ ನಾಗೇಂದ್ರ ನಾದಿಯಾಳನ್ನು ಇರಿಸಿದ್ದ. ಇದೇ ವೇಳೆ ಮಗಳ ಅನುಪಸ್ಥಿತಿಯನ್ನು ಗಮನಿಸಿದ ನಾದಿಯಾ ತಂದೆ ಮಹದೇವ ಅವರು ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದರು. ಈ ಕುರಿತು ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದರ ನಡುವೆಯೇ, ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಬಳಸಿಕೊಂಡು ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಮಲೆ ಮಹದೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

51 minutes ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

16 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

20 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago