Latest

ಮೆಟ್ರೋದಲ್ಲಿ ಗುಟ್ಕಾ ತಿಂದ ಪ್ರಯಾಣಿಕನ ವಿರುದ್ಧ ಆಕ್ರೋಶ: ವೈರಲ್ ವಿಡಿಯೋಗೆ ಸಂಸದನ ಪ್ರತಿಕ್ರಿಯೆ”

ಬೆಂಗಳೂರು ಮೆಟ್ರೋದಲ್ಲಿ ನಡೆದಿರುವ ಒಂದು ಘಟನೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ಜಾಗದಲ್ಲಿ ಸ್ವಚ್ಛತೆಯ ಅಗತ್ಯತೆ ಬಗ್ಗೆ ಮತ್ತೆ ಒಂದು ಬಾರಿ ಚರ್ಚೆಗೆ ಕಾರಣವಾಗಿದೆ.

ಘಟನೆ ವಿವರಕ್ಕೆ ಬಂದರೆ, ಒಬ್ಬ ವ್ಯಕ್ತಿ ಮೆಟ್ರೋ ರೈಲಿನಲ್ಲಿ ಗುಟ್ಕಾ ತಿನ್ನುತ್ತಿದ್ದನ್ನು ಗಮನಿಸಿದ ಇತರ ಪ್ರಯಾಣಿಕರು ತೀವ್ರವಾಗಿ ಪ್ರತಿಸ್ಪಂದಿಸಿದರು. “ನಿಮಗೆ ಕಾಮನ್ ಸೆನ್ಸ್ ಇಲ್ಲವೇ?” ಎಂಬ ತೀವ್ರ ಶಬ್ಧಗಳಲ್ಲಿ ಆ ವ್ಯಕ್ತಿಗೆ ತರಾಟೆ ತೆಗೆದುಕೊಂಡರು. “ಗುಟ್ಕಾ ತಿಂದು ಹೊರೆಸುವುದನ್ನು ನಿಲ್ಲಿಸಿ. ಇದು ನಮ್ಮೆಲ್ಲರ ಆಸ್ತಿ. ಇನ್ನು ಮುಂದೆ ಇಂಥ ವರ್ತನೆ ತೋರಬೇಡಿ,” ಎಂದು ಒಬ್ಬ ಪ್ರಯಾಣಿಕನೋರ್ವ ಸ್ಪಷ್ಟವಾಗಿ ಕ್ಲಾಸ್ ತೆಗೆದುಕೊಂಡ ದೃಶ್ಯ ಕ್ಯಾಮೆರಾಗೆ ಸಿಕ್ಕಿದೆ.

ಆದರೆ ಗುಟ್ಕಾ ತಿಂದ ವ್ಯಕ್ತಿ ಬಿಟ್ಟುಕೊಡುವ ಬದಲು, “ನಂಗೂ ಈ ಮೆಟ್ರೋ ಆಸ್ತಿಯಲ್ಲಿದ್ದೇನೆ. ನಾನೇನು ತಪ್ಪು ಮಾಡ್ಲಿಲ್ಲ” ಎಂಬ ಅಹಂಕಾರಪೂರ್ಣ ಭಾವದಿಂದ ತಿರುಗೇಟು ಕೊಟ್ಟ ಘಟನೆ ವಿಡಿಯೋದಲ್ಲಿ ದಾಖಲಾಗಿದ್ದು, ಇದೊಂದು ದಿಕ್ಕುತೋರಿಸುವ ಸಂಗತಿಯಾಗಿದೆ.

ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಹಲವರು ಸಾರ್ವಜನಿಕ ಸ್ವಚ್ಛತೆ ಕುರಿತಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ಘಟನೆಗೆ ಪ್ರತಿಕ್ರಿಯಿಸಿದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್, “ಮೆಟ್ರೋ ಎಲ್ಲರ ಆಸ್ತಿ. ಅದರ ಸ್ವಚ್ಛತೆ ನಮ್ಮ ಜವಾಬ್ದಾರಿ. ಗುಟ್ಕಾ ತಿನ್ನುವುದು, ಎಸೆಯುವುದು ಅಮಾನ್ಯ. ಬಿಎಂಆರ್ಸಿಎಲ್ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಹೇಳಿದ್ದಾರೆ.

ಈ ಪ್ರಕರಣ ಸಾರ್ವಜನಿಕ ಜಾಗದಲ್ಲಿ ನಡವಳಿಕೆಯ ಕುರಿತು ಪಾಠ ಕಲಿಸುತ್ತಿದ್ದು, ಸಾರ್ವಜನಿಕ ಸಾರಿಗೆ ಬಳಕೆದಾರರು ಹೆಚ್ಚಿನ ಜವಾಬ್ದಾರಿಯಿಂದ ವರ್ತಿಸಬೇಕಾದ ಅಗತ್ಯವಿದೆ ಎಂಬ ಸಂದೇಶವನ್ನು ಒದಗಿಸುತ್ತದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

18 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago