Categories: Latest

ಮಾದನಬಾವಿ ಗೋಶಾಲೆಯ ದುಸ್ಥಿತಿಗೆ ಆಕ್ರೋಶ: ಗೋವುಗಳಿಗೆ ಮೇವು, ನೀರು ಹಾಗೂ ಚಿಕಿತ್ಸೆ ಒದಗಿಸಲು ಆಗ್ರಹ

ಧಾರವಾಡ: ತಾಲೂಕಿನ ಮಾದನಬಾವಿ ಗ್ರಾಮದ ಗೋಶಾಲೆಯಲ್ಲಿ ಗೋವುಗಳ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಗೋಶಾಲೆಯ ಅವ್ಯವಸ್ಥೆ ಸರಿಪಡಿಸಿ ಅನಾರೋಗ್ಯಪೀಡಿತ ಗೋವುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಗೋಶಾಲೆಯಲ್ಲಿ 130ಕ್ಕೂ ಹೆಚ್ಚು ಗೋವುಗಳಿದ್ದು, ಅವುಗಳಿಗೆ ಅಗತ್ಯ ಪ್ರಮಾಣದಲ್ಲಿ ಮೇವು ಮತ್ತು ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಹಲವು ಗೋವುಗಳು ಅನಾರೋಗ್ಯದಿಂದ ಬಳಲುತ್ತಿದ್ದರೂ ಅವುಗಳ ಆರೈಕೆ ಹಾಗೂ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಗೋಶಾಲೆಗೆ ಪಶುಸಂಗೋಪನಾ ಇಲಾಖೆಯ ವೈದ್ಯಾಧಿಕಾರಿಗಳು ತಕ್ಷಣ ಭೇಟಿ ನೀಡಿ ಗೋವುಗಳ ಆರೋಗ್ಯ ತಪಾಸಣೆ ನಡೆಸಬೇಕು. ಅನಾರೋಗ್ಯಪೀಡಿತ ಗೋವುಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಬೇಕು. ಗೋವುಗಳಿಗೆ ಸಮರ್ಪಕ ಆಹಾರ, ನೀರು ಹಾಗೂ ಆರೋಗ್ಯಕರ ವಾತಾವರಣ ಕಲ್ಪಿಸುವುದರ ಜೊತೆಗೆ ಗೋಶಾಲೆಯ ನಿರ್ವಹಣೆಯನ್ನು ವ್ಯವಸ್ಥಿತಗೊಳಿಸಬೇಕು ಎಂದು ಒತ್ತಾಯಿಸಿದರು.

ಇದಲ್ಲದೆ, ಗೋಶಾಲೆಗೆ ಸೇರಿದ 9 ಎಕರೆ ಜಮೀನಿನ ಗಡಿಯನ್ನು ಗುರುತಿಸಿ ಸುತ್ತಲೂ ಕಾಂಪೌಂಡ್ ನಿರ್ಮಿಸಬೇಕು. ಭದ್ರತೆಗಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಗೋಶಾಲೆಯ ಖಾಲಿ ಜಾಗದಲ್ಲಿ ಹಸಿರು ಹುಲ್ಲು ಬೆಳೆಸಿ ವರ್ಷವಿಡೀ ಗೋವುಗಳಿಗೆ ಮೇವು ಲಭ್ಯವಾಗುವಂತೆ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿಯೊಂದು ಗೋವಿಗೂ ಅಗತ್ಯ ಪ್ರಮಾಣದಲ್ಲಿ ಒಣ ಮೇವು, ಹಸಿರು ಮೇವು, ಹುಲ್ಲು, ಹೊಟ್ಟು, ತೊಗರಿ ಹೊಟ್ಟು ಹಾಗೂ ಬತ್ತದ ನುಚ್ಚು ಸೇರಿದಂತೆ ಪೌಷ್ಟಿಕ ಆಹಾರ ಒದಗಿಸಬೇಕು. ಗೋವುಗಳಿಗೆ ನೀರು ಮತ್ತು ಮೇವು ವಿತರಣೆ ಹಾಗೂ ಗೋಶಾಲೆಯ ದೈನಂದಿನ ನಿರ್ವಹಣೆಗಾಗಿ ಪ್ರತ್ಯೇಕ ವ್ಯಕ್ತಿಯೊಬ್ಬರನ್ನು ನೇಮಕ ಮಾಡಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಒತ್ತಾಯಿಸಿದರು.

ಗೋಶಾಲೆಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿದ್ದರೂ ಜಿಲ್ಲಾ ಆಡಳಿತ ಅದನ್ನು ಸಮರ್ಪಕವಾಗಿ ಬಳಸಿಕೊಂಡಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಗೋಶಾಲೆಯ ನಿರ್ವಹಣೆಯಲ್ಲಿ ತಕ್ಷಣ ಸುಧಾರಣೆ ತರದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಸತ್ಯಪ್ರಮೋದೇಂದ್ರ ಸ್ವಾಮೀಜಿ, ಅಣ್ಣಪ್ಪ ದಿವಟಗಿ, ಮಂಜುನಾಥ ಕಾಟಕರ್, ವಿಶ್ವನಾಥ ಬೂದುರ, ಸಿದ್ಧು ಹಿರೇಮಠ, ಸೋಮು ಕಮತಗಿ, ನಿರಂಜನ ಗೌಡರ ಹಾಗೂ ಮಹಾಲಿಂಗ ಐಗಳಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ವರದಿ: ಶಿವು ಪಿ.ಆರ್.

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ರಾಜಲಕ್ಷ್ಮಿ ಜ್ಯುವೆಲ್ಲರ್ಸ್‌ನಲ್ಲಿ ಬೆಳ್ಳಿ ಆಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದ ಎದುರಿನ ರಾಜಲಕ್ಷ್ಮಿ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆದಿದ್ದ ಬೆಳ್ಳಿ ಆಭರಣ ಕಳವು ಪ್ರಕರಣವನ್ನು ಮುಂಡಗೋಡ ಪೊಲೀಸರು…

5 hours ago

ಫೋನ್‌ಪೇ ಹಣ ಪಾವತಿ ನಕಲಿ ಸಂದೇಶ ತೋರಿಸಿ ಮೊಬೈಲ್ ವಂಚನೆ: ಬೆಂಗಳೂರಿನಲ್ಲಿ ಆರೋಪಿಯ ಬಂಧನ

ಕುಮಟಾ: ಮೊಬೈಲ್ ಖರೀದಿಸಿ ಫೋನ್‌ಪೇ ಮೂಲಕ ಹಣ ಪಾವತಿಸಿರುವುದಾಗಿ ನಕಲಿ ಸಂದೇಶ ತೋರಿಸಿ ಅಂಗಡಿ ಮಾಲೀಕರಿಗೆ ವಂಚಿಸಿ ಪರಾರಿಯಾಗಿದ್ದ ಆರೋಪಿಯನ್ನು…

5 hours ago

ಮಾರ್ಚ್ ಅಂತ್ಯದೊಳಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸಿ: ಸಿಇಒ ಡಾ. ದಿಲೀಷ್ ಶಶಿ ಕಟ್ಟುನಿಟ್ಟಿನ ಸೂಚನೆ

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು (MVS) ಯೋಜನೆಯ ಕಾಮಗಾರಿಯನ್ನು ಉತ್ತರ…

5 hours ago

ಬೆಂಗಳೂರಿನಲ್ಲಿ ಭೀಕರ ಹತ್ಯಾಕಾಂಡ: ಪತ್ನಿ ಸೇರಿ ಒಂದೇ ಕುಟುಂಬದ 7 ಮಂದಿಯನ್ನು ಕೊಂದ ಪತಿ!

ಕೌಟುಂಬಿಕ ಕಲಹಕ್ಕೆ ಏಳು ಜೀವಗಳ ಬಲಿ; ಕ್ಯಾಬ್ ಚಾಲಕ ಇಂದುಶೇಖರ್ ಬಂಧನ, ವಿಚಾರಣೆಯಲ್ಲಿ ಬಯಲಾಯ್ತು ನರಮೇಧದ ರಹಸ್ಯ ಬೆಂಗಳೂರು: ಸಿಲಿಕಾನ್…

2 days ago

ಟೈಗರ್ ಶ್ರಾಫ್‌ಗೆ ಸಂಬಂಧಿಸಿದ ಗುಂಡಿನ ದಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹರಿಯಾಣದ 22 ವರ್ಷದ ಯುವತಿ ಅರೆಸ್ಟ್!

ಪ್ರಕರಣದಲ್ಲಿ ಬಂಧಿತರ ಸಂಖ್ಯೆ 13ಕ್ಕೆ ಏರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡದ ಶಂಕೆ ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್‌ಗೆ…

2 days ago

ಗೌರಿಬಿದನೂರಿನ ಪ್ರಶಾಂತ್ ನಗರದಲ್ಲಿ ಸರಣಿ ಕಳ್ಳತನ: ವ್ಯಾಪಾರಸ್ಥರಲ್ಲಿ ಆತಂಕ!

ಅಂಗಡಿಗಳು, ನಂದಿನಿ ಬೂತ್‌, ಪಾರ್ಲರ್‌ಗಳೇ ಕಳ್ಳರ ಟಾರ್ಗೆಟ್ – ರಾತ್ರಿ ಗಸ್ತು ಹೆಚ್ಚಿಸಲು ಸ್ಥಳೀಯರ ಆಗ್ರಹ ಗೌರಿಬಿದನೂರು: ನಗರದ ಪ್ರಶಾಂತ್…

2 days ago