Categories: CrimeLatest

ಹೊರಗುತ್ತಿಗೆ ನೌಕರನಿಂದ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಯ ಸಹೋದರಿ ಮೇಲೆ ಅತ್ಯಾಚಾರ..! ಆರೈಕೆಗೆ ಬಂದವಳಿಗೆ ನರಕಯಾತನೆ.

ಬಾಗಲಕೋಟೆ: ಜನರ ಆರೋಗ್ಯ ಕಾಪಾಡಬೇಕಾದ ಆಸ್ಪತ್ರೆಯೇ ಮಹಿಳೆಯರಿಗೆ ಅಸುರಕ್ಷಿತ ತಾಣವಾಗುತ್ತಿರುವ ಆತಂಕಕಾರಿ ಘಟನೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಚಿಕಿತ್ಸೆ ಪಡೆಯುತ್ತಿದ್ದ ತನ್ನ ಸಹೋದರನ ಆರೈಕೆಗೆ ಬಂದಿದ್ದ ಮಹಿಳೆಯ ಮೇಲೆ ಆಸ್ಪತ್ರೆಯ ಹೊರಗುತ್ತಿಗೆ ನೌಕರನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯ ಸಹೋದರ ಕಳೆದ ಒಂದು ತಿಂಗಳಿನಿಂದ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ 34 ವರ್ಷದ ಮಹಿಳೆ ಸಹೋದರನ ಆರೈಕೆಗೆ ಆಸ್ಪತ್ರೆಯಲ್ಲೇ ತಂಗಿದ್ದರು. ಇದೇ ವೇಳೆ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಫರೀದ್ ಸಾಬ್ ಡಾಂಗೆ ಎಂಬಾತ ಮಹಿಳೆಯ ಪರಿಚಯ ಬೆಳೆಸಿಕೊಂಡಿದ್ದಾನೆ ಎನ್ನಲಾಗಿದೆ.

ಮೇ 4ರ ತಡರಾತ್ರಿ 12ರಿಂದ 2 ಗಂಟೆಯ ನಡುವಿನ ಅವಧಿಯಲ್ಲಿ, ಆಸ್ಪತ್ರೆಯಲ್ಲಿ ಜನ ಸಂಚಾರ ಕಡಿಮೆ ಇದ್ದ ಸಮಯವನ್ನು ಆರೋಪಿ ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಹಿಳೆಗೆ ಪ್ರಾಣ ಬೆದರಿಕೆ ಹಾಕಿ ಬಾತ್‌ರೂಮ್‌ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಕೃತ್ಯದ ಬಳಿಕ ಮಹಿಳೆ ಹೊರಬರದಂತೆ ಬಾಗಿಲು ಲಾಕ್ ಮಾಡಿ ಆರೋಪಿ ತನ್ನ ಕೆಲಸಕ್ಕೆ ತೆರಳಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಘಟನೆಯ ವಿಚಾರ ತಿಳಿದ ಕೂಡಲೇ ಮಹಿಳೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ಸಂಬಂಧ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ್ ಕೋಣಿ ಅವರು ಆರೋಪಿಯನ್ನು ತಕ್ಷಣದಿಂದಲೇ ಕೆಲಸದಿಂದ ವಜಾಗೊಳಿಸಿ ಆದೇಶಿಸಿದ್ದಾರೆ.

ಆಸ್ಪತ್ರೆಯಂತಹ ಸಾರ್ವಜನಿಕ ಸ್ಥಳಗಳಲ್ಲಿಯೂ ಮಹಿಳೆಯರ ಸುರಕ್ಷತೆ ಪ್ರಶ್ನಾರ್ಥಕವಾಗುತ್ತಿರುವ ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

12 minutes ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

8 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

23 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago