ಜಮ್ಮು-ಕಾಶ್ಮೀರದ ಪ್ರವಾಸಿ ಪ್ರದೇಶವೊಂದರಲ್ಲಿ ಸಂಭವಿಸಿದ ಭೀಕರ ಉಗ್ರ ದಾಳಿ ರಾಷ್ಟ್ರವನ್ನೇ ಬೆಚ್ಚಿಬೀಳಿಸಿದೆ. ಈ ದಾಳಿಯಲ್ಲಿ ಕನಿಷ್ಠ 28 ಮಂದಿ ಜೀವಹಾನಿಗೆ ಒಳಗಾಗಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ದಾಳಿಗೆ ಸಂಬಂಧಪಟ್ಟ ಭಯೋತ್ಪಾದಕರ ಫೋಟೋಗಳನ್ನು ಜಮ್ಮು-ಕಾಶ್ಮೀರ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಭದ್ರತಾ ವಲಯದ ಮೂಲಗಳ ಪ್ರಕಾರ, ದಾಳಿ ನಡೆಸಿದ ಉಗ್ರರನ್ನು ಅಬು, ಆಸಿಫ್ ಮತ್ತು ಸುಲೇಮಾನ್ ಎಂದು ಗುರುತಿಸಲಾಗಿದೆ. ಈತನಿಖೆಯನ್ನು ಈಗ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನ್ನ ಹೆಗಲಿಗೆ ತೆಗೆದುಕೊಂಡಿದ್ದು, ವಿಶೇಷ ಅಧಿಕಾರಿಗಳ ತಂಡ ಈಗಾಗಲೇ ಕಾಶ್ಮೀರಕ್ಕೆ ಭೇಟಿ ನೀಡಿದೆ.
ದಾಳಿಯ ಬಳಿಕ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, “ಭಯೋತ್ಪಾದಕರಿಗೆ ಕ್ಷಮೆ ಎನ್ನುವುದು ಇರುವುದೇ ಇಲ್ಲ” ಎಂದು ಸ್ಪಷ್ಟನೆ ನೀಡಿದ್ದು, ಉಗ್ರರ ವಿರುದ್ಧ ಪ್ರತಿ ಕ್ರಮ ಕೈಗೊಳ್ಳಲಾಗುವುದು ಎಂಬುದಕ್ಕೆ ಬಲವಂತ ನೀಡಿದ್ದಾರೆ.
ಇದರ ಮಧ್ಯೆ ಸೇನೆ ನಡೆಸಿದ ತಕ್ಷಣದ ಪ್ರತಿಕ್ರಿಯಾತ್ಮಕ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಇಡೀ ಕಣಿವೆ ಪ್ರದೇಶದಲ್ಲಿ ಭದ್ರತಾ ಕ್ರಮವನ್ನು ತೀವ್ರಗೊಳಿಸಲಾಗಿದ್ದು, ಶಂಕಾಸ್ಪದ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ.
ಈ ಹೃದಯವಿದ್ರಾವಕ ದಾಳಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲು ಭಯೋತ್ಪಾದನೆ ವಿರುದ್ಧವಾಗಿ ಕಣಿವೆಯಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ವ್ಯಾಪಾರ, ಸಾರಿಗೆ ಮತ್ತು ಶಾಲಾ-ಕಾಲೇಜುಗಳು ಬಂದ್ ಆಗಿರುವುದು ಶೋಕದ ವಾತಾವರಣವನ್ನು ಇನ್ನೂ ಗಂಭೀರಗೊಳಿಸಿದೆ.
ರಾಷ್ಟ್ರೀಯ ಮಟ್ಟದಲ್ಲಿ ಈ ಘಟನೆಯ ವಿರುದ್ಧ ಕಿಡಿಕಾರಿರುವ ಜನತೆ, ಉಗ್ರರ ವಿರುದ್ಧ ತೀವ್ರ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…