Latest

ಪಾಕಿಸ್ತಾನ ಧ್ವಜ ಅಂಟಿಸಿದ ಪ್ರಕರಣ: ಕಲಬುರಗಿನಲ್ಲಿ ಬಜರಂಗದಳದ ಆರು ಕಾರ್ಯಕರ್ತರು ಪೊಲೀಸ್‌ ವಶಕ್ಕೆ

ಕಲಬುರಗಿ: ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜ ಅಂಟಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಜರಂಗದಳದ ಆರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಜಗತ್ ವೃತ್ತ ಹಾಗೂ ಇನ್ನಿತರ ಪ್ರಮುಖ ಪ್ರದೇಶಗಳಲ್ಲಿ ಪಾಕಿಸ್ತಾನ ಧ್ವಜಗಳನ್ನು ರಸ್ತೆಪಕ್ಕ, ಸಾರ್ವಜನಿಕ ಶೌಚಾಲಯಗಳ ಬಳಿ ಅಂಟಿಸಲಾಗಿದೆ. ಈ ಕುರಿತು ಮಾಹಿತಿ ಪಡೆದ ಗುಪ್ತಚರ ಇಲಾಖೆ ಮತ್ತು ಬ್ರಹ್ಮಪುರ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಧ್ವಜಗಳನ್ನು ತೆರವುಗೊಳಿಸಿದರು.

ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಈ ಕುರಿತು ಪ್ರತಿಕ್ರಿಯಿಸಿ, “ಇತ್ತೀಚೆಗೆ ದೇಶಾದ್ಯಂತ ವಿವಿಧ ಸಂಘಟನೆಗಳು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಲು ವಿಭಿನ್ನ ರೀತಿಯ ಪ್ರತಿಭಟನೆಗಳಿಗೆ ಮೊರೆಹೊಡೆದಿವೆ. ಕೆಲವರು ಯಾವುದೇ ಅಧಿಕಾರಿಗಳ ಅನುಮತಿ ಪಡೆಯದೇ ಪಾಕಿಸ್ತಾನ ಧ್ವಜ ಅಂಟಿಸಿರುವುದು ಬೆಳಕಿಗೆ ಬಂದಿದೆ. ಇದು ಭಯೋತ್ಪಾದನೆಗೆ ಸೇರುವಂತ ಕೃತ್ಯವಾಗದಿದ್ದರೂ, ಸಾರ್ವಜನಿಕ ಶಾಂತಿಯ ವಿರುದ್ಧವಾಗಿದೆ,” ಎಂದು ಹೇಳಿದರು.  ಈ ವೇಳೆ ಆರು ಬಜರಂಗದಳದ ಕಾರ್ಯಕರ್ತರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಘಟನೆ ಸಂಬಂಧ ಮುಂದಿನ ತನಿಖೆ ಜಾರಿಯಲ್ಲಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

17 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago