ಲಂಡನ್: ಪಾಕಿಸ್ತಾನ ಕ್ರಿಕೆಟ್ ಲೋಕವನ್ನು ನಾಚಿಕೆಗೀಡಾಗಿಸಿದ ಗಂಭೀರ ಘಟನೆ ಇಂಗ್ಲೆಂಡ್‌ನಲ್ಲಿ ಬೆಳಕಿಗೆ ಬಂದಿದೆ. ಇಂಗ್ಲೆಂಡ್ ಪ್ರವಾಸದಲ್ಲಿದ್ದ ಪಾಕಿಸ್ತಾನ ಎ ತಂಡದ ಕ್ರಿಕೆಟಿಗ ಹೈದರ್ ಅಲಿ (24) ಅವರನ್ನು ಅತ್ಯಾಚಾರ ಆರೋಪದ ಮೇಲೆ ಗ್ರೇಟರ್ ಮ್ಯಾಂಚೆಸ್ಟರ್ ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 4, 2025ರಂದು ದೂರು ದಾಖಲಾಗುತ್ತಿದ್ದಂತೆಯೇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದು, ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಜಾಮೀನು ಮಂಜೂರಾದರೂ, ತನಿಖೆ ಪೂರ್ಣಗೊಳ್ಳುವವರೆಗೆ ದೇಶ ಬಿಟ್ಟು ಹೋಗಬಾರದು ಎಂಬ ಷರತ್ತಿನಡಿ ಅವರ ಪಾಸ್ಪೋರ್ಟ್ ಮುಟ್ಟುಗೋಲು ಹಾಕಲಾಗಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೈದರ್ ಅಲಿಯನ್ನು ತಕ್ಷಣವೇ ಅಮಾನತು ಮಾಡಿದೆ. ಅವರು ಪಾಕಿಸ್ತಾನ ಎ ತಂಡದೊಂದಿಗೆ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಸರಣಿಗಾಗಿ ಬಂದಿದ್ದರು.
ಬೆಕೆನ್ಹ್ಯಾಮ್ ಮೈದಾನದಲ್ಲಿ ಪಂದ್ಯಾವಳಿ ನಡೆಯುತ್ತಿದ್ದ ವೇಳೆ, ಅಲಿಯನ್ನು ಪೊಲೀಸರು ಬಂಧಿಸಿದರು. ಇದೇ ಮೈದಾನದಲ್ಲಿ ಭಾರತೀಯ ಕ್ರಿಕೆಟ್ ತಂಡವೂ ಇತ್ತೀಚೆಗೆ ಅಭ್ಯಾಸ ನಡೆಸಿತ್ತು.
ಗ್ರೇಟರ್ ಮ್ಯಾಂಚೆಸ್ಟರ್ ಪೊಲೀಸರು ಅಧಿಕೃತ ಹೇಳಿಕೆಯಲ್ಲಿ, “ಆಗಸ್ಟ್ 4 ರಂದು ಅತ್ಯಾಚಾರದ ದೂರು ಸ್ವೀಕರಿಸಿದ ನಂತರ, 24 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ” ಎಂದು ತಿಳಿಸಿದರು.
ಈ ಘಟನೆ ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೊಂದು ವಿವಾದವನ್ನು ತಂದಿದ್ದು, ಅಭಿಮಾನಿಗಳು ಹಾಗೂ ಕ್ರಿಕೆಟ್ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…