Latest

ಜಗನ್‌ ಬೆಂಗಾವಲು ಕಾರಿನಡಿಗೆ ಸಿಲುಕಿ ಪಕ್ಷದ ಕಾರ್ಯಕರ್ತ ಸಾವು: ವಿಜಯವಾಡದಲ್ಲಿ ದಾರುಣ ಘಟನೆ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ನಾಯಕ ವೈಎಸ್ ಜಗನ್‌ ಮೋಹನ್‌ ರೆಡ್ಡಿ ಅವರ ಭೇಟಿ ವೇಳೆ ನಡೆದ ಭೀಕರ ಘಟನೆೆಯಲ್ಲಿ ಪಕ್ಷದ ಹಿರಿಯ ಕಾರ್ಯಕರ್ತನೊಬ್ಬ ದಾರುಣ ಅಂತ್ಯ ಕಂಡಿದ್ದಾರೆ. ವಿಜಯವಾಡದ ತಾಡೆಪಲ್ಲಿ ಬಳಿ ಸಾವಿರಾರು ಅಭಿಮಾನಿಗಳು ಜಗನ್ ರನ್ನು ನೋಡಲು ಕೂಡಿದ್ದ ವೇಳೆ ನಡೆದ ಈ ದುರಂತದಲ್ಲಿ, ಚೀಲಿ ಸಿಂಗಯ್ಯ (65) ಎಂಬ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ.

ಇತ್ತೀಚೆಗಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದ ಮತ್ತೊಬ್ಬ ಕಾರ್ಯಕರ್ತನ ಕುಟುಂಬಕ್ಕೆ ಸಾಂತ್ವನ ನೀಡಲು ಜಗನ್‌ ರೆಂಟಪಲ್ಲಿಗೆ ತೆರಳಿದ್ದರು. ಈ ವೇಳೆ ಜಗನ್‌ ಆಗಮನದ ಸುದ್ದಿಯೊಂದಿಗೆ ಭಕ್ತರು ಹಾಗೂ ಪಕ್ಷದ ನೂರಾರು ಕಾರ್ಯಕರ್ತರು ತಡರಾತ್ರಿಯೇ ತಾಡೆಪಲ್ಲಿಯಿಂದ ರೆಂಟಪಲ್ಲಿಗೆ ಜಮಾಯಿಸಿದ್ದರು.

ಸರಕಾರದಿಂದ ಕೇವಲ ನೂರು ಮಂದಿ ಮಾತ್ರ ಹಾಜರಾಗುವಂತೆ ಹಾಗೂ ಮೂರು ಕಾರುಗಳಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗಿತ್ತು. ಆದರೆ ಭಾರೀ ಜನಸಂದಣಿಯಲ್ಲಿ ಸಿಂಗಯ್ಯ ಅವರು ಜಗನ್‌ ಕಾರಿಗೆ ಹೂವಿನ ಹಾರ ಹಾಕಲು ಮುಂದಾದಾಗ, ಅವರು ಅಕ್ಷರಶಃ ಬೆಂಗಾವಲು ವಾಹನದ ತಳದಲ್ಲಿ ಸಿಲುಕಿ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಯಾರಿಗೂ ಇದು ಗಮನಿಸದ ಕಾರಣ, ಮೆರವಣಿಗೆ ವಾಹನಗಳು ಅವರ ಮೇಲೆ ಹರಿದು ಹೋಗಿದ್ದು, ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಈ ಘಟನೆಯಿಂದ ವೈಎಸ್‌ಆರ್‌ಸಿಪಿ ಶಿಬಿರದಲ್ಲಿ ಆಘಾತದ ಮೂಡಿದ್ದು, ಪೊಲೀಸರು ಘಟನೆಯ ಬಗ್ಗೆ ತನಿಖೆ ಪ್ರಾರಂಭಿಸಿದ್ದಾರೆ. ಸಹಜವಾಗಿಯೇ ಭದ್ರತಾ ಲೋಪ, ಜನಸಂದಣಿಯ ನಿರ್ವಹಣೆಯಲ್ಲಿ ವಿಫಲತೆ ಎಂಬ ಪ್ರಶ್ನೆಗಳು ಸಹ ಎದ್ದುಕೊಂಡಿವೆ.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

9 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

14 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

14 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

14 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

15 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

15 hours ago