ನರೇಗಾ ಕಾಮಗಾರಿಗೆ ಬಿಲ್ಪ ಪಾಸ್ ಮಾಡಲು 20 ಪರ್ಸೆಂಟ್ ಕಮಿಷನ್ ನೀಡುವಂತೆ ಪಿಡಿಒ ಗುತ್ತಿಗೆದಾರನಿಗೆ ಒತ್ತಾಯಿಸಿರುವ ಅಂತಹ ಆಡಿಯೋ ಒಂದು ಹೊರಬಿದ್ದಿದ್ದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.
ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿ ಗ್ರಾ.ಪಂ ಪಿಡಿಒ ಶೋಭಾ ಕಾಮಗಾರಿ ಬಿಲ್ ಪಾಸ್ ಮಾಡಲು 20% ಕಮಿಷನ್ ಕೊಡುವಂತೆ ಕೇಳಿರುವ ಆಡಿಯೋ ವೈರಲ್ ಆಗಿದೆ.
ಕಾಮಗಾರಿ ನಡೆಸಿರುವ ವ್ಯಕ್ತಿ ಹಾಗೂ ಪಿಡಿಓ ಶೋಭಾ ನಡುವಿನ ಸಂಭಾಷಣೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆಡಿಯೋದಲ್ಲಿ ಅಧ್ಯಕ್ಷರಿಗೆ, ಇಂಜಿನಿಯರ್, ಇಓ, ಡಿಎಸ್ ಹಾಗೂ ಕಚೇರಿ ಸಿಬ್ಬಂದಿಗೂ ಪರ್ಸೆಂಟೇಜ್ ನೀಡಬೇಕು. ಹಾಗಾಗಿ 20% ಕಮಿಷನ್ ನೀಡುವಂತೆ ಪಿಡಿಓ ಚೌಕಾಸಿ ನಡೆಸಿರುವ ಆಡಿಯೋ ಹೊರ ಬಿದ್ದಿದೆ. ಈ ವಿಚಾರವಾಗಿ ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದು ಅಧಿಕಾರಿಯ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…